ಹಾಸನ : ಸುಪ್ರಸಿದ್ದ ಹಾಸನಾದ ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡಲಾಗುತ್ತದೆ. ಕಳೆದ 10 ದಿನಗಳಿಂದ ನಡೆಯುತ್ತಿದ್ದ ಹಾಸನಾಂಬೆ ಉತ್ಸವ ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಿದೆ. ಬೇರೆ ಭಾಗಗಳಿಂದ ದೇವಿ ದರ್ಶನಕ್ಕೆ ಬಾರದಂತೆ ಭಕ್ತರಲ್ಲಿ ಜಿಲ್ಲಾಡಳಿತ ಮನವಿ ಮಾಡಿದೆ. ದೇಗುಲ ಒಳಭಾಗದಲ್ಲಿ ಸ್ವಚ್ಚತೆ, ಸಿಂಗಾರ, ಪೂಜಾ ಕೈಂಕರ್ಯಗಳು ನಡೆಯುತ್ತಿವೆ.
ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಗೂ ಗಣ್ಯರ ಸಮ್ಮುಖದಲ್ಲಿ ದೇಗುಲದ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮೂಲಕ ಈ ವರ್ಷದ ದರ್ಶನೋತ್ಸವಕ್ಕೆ ಬೀಳಲಿದೆ ವಿದ್ಯುಕ್ತವಾಗಿ ತೆರೆ ಬೀಳಲಿದೆ.ಹಾಸನಾಂಬೆ ದೇಗುಲದ ಹೊರಭಾಗ ಆವರಣದಲ್ಲಿ ನಿನ್ನೆ ಸಿದ್ದೇಶ್ವರ ಸ್ವಾಮಿ ಜಾತ್ರೆ ನಡೆಯಿತು.ಇಂದು ಬೆಳಗ್ಗೆ 6 ಗಂಟೆಗೆ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವ ನಡೆಯಲಿದೆ. ಕೆಂಡೋತ್ಸವದ ನಂತರ ಹಾಸನಾಂಬೆ ದೇವಿಗೆ ಪೂಜೆ ನಡೆಯಲಿದೆ. ಬಳಿಕ ಹಾಸನಾಂಬೆ ನಿರಾಭರಣ ದೇವಿಯಾಗಲಿದ್ದಾಳೆ.
ಕಳೆದ 10 ದಿನಗಳಿಂದ ಹಾಸನಾಂಬೆ ದೇವಿ ದರ್ಶನಕ್ಕೆ ಸುಮಾರು 18 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಭೇಟಿ ನೀಡಿದ್ದಾರೆ. ಈ ವೇಳೆ ಭಕ್ತರಿಗೆ ಯಾವುದೇ ರೀತಿಯಾಗಿ ಸಮಸ್ಯೆ ಆಗದಂತೆ ತೊಂದರೆ ಆಗದಂತೆ ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಂಡಿತ್ತು. ಅಲ್ಲದೆ ದೇವಸ್ಥಾನಕ್ಕೆ ಈ ಬಾರಿಯೂ ಕೂಡ ಅತಿ ಹೆಚ್ಚು ದಕ್ಷಿಣೆ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಈ ಬಾರಿ ಹಾಸನಾಂಬೆ ದೇವಿಯ ದರ್ಶನ, ಜಾತ್ರೆ ಯಾವುದೇ ಸಮಸ್ಯೆ ಇಲ್ಲದೆ ತೊಂದರೆ ಇಲ್ಲದೆ ಸುಸೂತ್ರವಾಗಿ ನಡೆಯಿತು.