ನವದೆಹಲಿ : ಗಂಡ ಹೆಂಡತಿ ಜಗಳ ಉಂಡು ಮಲಗುವವರೆಗೆ ಅಂತ ಹಿರಿಯರು ಗಾದೆ ಹೇಳಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಒಂದು ಜಗಳ, ಗಲಾಟೆ, ಮನಸ್ತಾಪಗಳು ವಿಕೋಪಕ್ಕೆ ಹೋಗಿ ಪ್ರಾಣಕ್ಕೆ ಕುತ್ತು ತರುತ್ತಿವೆ. ದಂಪತಿಗಳ ನಡುವೆ ಗಲಾಟೆ ಉಂಟಾಗಿದ್ದು ಈ ವೇಳೆ ರೊಚ್ಚಿಗೆದ್ದ ಪತ್ನಿ ಗಂಡನ ಮರ್ಮಾಂಗವನ್ನೇ ಕತ್ತರಿಸಿ ಹಾಕಿರುವ ಘಟನೆ ಉತ್ತರ ದಿಲ್ಲಿಯಲ್ಲಿ ನಡೆದಿದೆ.
ಹೌದು ಗಾಯಾಳು ಪತಿಯನ್ನು ಸಫ್ದರ್ ಜಂಗ್ ಎಂದು ಗುರುತಿಸಲಾಗಿದ್ದು, ಘಟನೆ ನಡೆದ ತಕ್ಷಣ ಆತನನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಸಫ್ದರ್ ಜಂಗ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಘಟನೆಯ ಕುರಿತು ಅವರ ಹೇಳಿಕೆಯನ್ನ ದಾಖಲಿಸಿಕೊಳ್ಳಬೇಕಿದೆ. ಗಾಯಾಳು ಪತಿಯು ಚೇತರಿಸಿಕೊಂಡ ನಂತರ, ಘಟನೆಯ ಬಗ್ಗೆ ಮತ್ತಷ್ಟು ವಿವರಗಳು ಲಭ್ಯವಾಗಲಿವೆ.ಸದ್ಯ ಆರೋಪಿ ಮಹಿಳೆ ತಲೆ ಮರೆಸಿಕೊಂಡಿದ್ದು, ಆಕೆಯನ್ನು ಸೆರೆ ಹಿಡಿಯುವ ಪ್ರಯತ್ನಗಳು ಮುಂದುವರಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ.