ಹೈದರಾಬಾದ್: ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಹೈದರಾಬಾದ್ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ತೆಲಂಗಾಣ ರಸ್ತೆ ಸಾರಿಗೆ ನಿಗಮದ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಕೋಡಾಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಈ ಅಪಘಾತ ಸಂಭವಿಸಿದೆ.
ಪರಿಣಾಮವಾಗಿ 30 ಪ್ರಯಾಣಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ಪೊಲೀಸರು ತನಿಖೆ ಆರಂಭಿಸಿದ್ದಾರೆ







