ಚಿತ್ರದುರ್ಗ : ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ರೈತರಿಗೆ ನೀಡಿದ ನೋಟಿಸ್ ಗಳನ್ನು ಹಿಂಪಡೆಯಿರಿ ಎಂದು ಖಡಕ್ ಆಗಿ ಸೂಚನೆ ನೀಡಿದ್ದಾರೆ. ಇದೀಗ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಷ್ಟಕ್ಕೆಲ್ಲ ಮೂಲ ಕಾರಣಿಕರ್ತರಾದ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ರಾಜ್ಯದಿಂದ ಗಡಿಪಾರು ಮಾಡಿದರೆ ಒಳ್ಳೆಯದಾಗುತ್ತೆ ಎಂದು ಅಗ್ರಹಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬಿ ವೈ ವಿಜಯೇಂದ್ರ ಅವರು, ಜಮೀರ್ ಅಹ್ಮದ್ ಸಂವಿಧಾನದ ಬಗ್ಗೆ ಮಾತಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ದಬ್ಬಾಳಿಕೆ ಮಾಡಿ ರೈತರ ಜಮೀನು, ಮಠಮಾನ್ಯಗಳ ಆಸ್ತಿ ಕಬಳಿಕೆ ಮಾಡುತ್ತಿದ್ದಾರೆ.
ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡುತ್ತಿದ್ದಾರೆ. ಜಮೀರ್ ಅಹ್ಮದರನ್ನು ಕೂಡಲೇ ಗಡಿಪಾರು ಮಾಡಿದರೆ ರಾಜ್ಯಕ್ಕೆ ಒಳಿತಾಗುತ್ತೆ. ಸಚಿವ ಜಮೀರ್ ಅಹಮದ್ ಎಲ್ಲವನ್ನು ಸೃಷ್ಟಿ ಮಾಡುತ್ತಿದ್ದಾರೆ. ಶಾಂತಿಯುತ ರಾಜ್ಯದಲ್ಲಿ ಮಂತ್ರಿಯಿಂದ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೂಡ ವಾಗ್ದಾಳಿ ನಡೆಸಿದ ಬಿ ವೈ ವಿಜಯೇಂದ್ರ, ಅಹಿಂದ ಹೆಸರು ಹೇಳಿ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಬಿವಿ ವಿಜಯೇಂದ್ರ ವಾಗ್ದಾಳಿ ನಡೆಸಿ, ಅಭಿವೃದ್ಧಿ ಬಗ್ಗೆ ಆಡಳಿತ ಪಕ್ಷದ ಶಾಸಕರಿಂದಲೇ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿ ಕಾರಿದರು.