ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಬ್ರಾಹ್ಮಣ ಸಂಪ್ರದಾಯದಂತೆ ವಿಲ್ಸನ್ ಗಾರ್ಡನ್ನಿನ ಚಿತಾಗಾರದಲ್ಲಿ ನೆರವೇರಿಸಲಾಯಿತು. ಅಣ್ಣಾವ್ರು ಮುಟ್ಟಿದ ಗಟ್ಟ ತೆಗೆಸದ ನಟ ಗುರುಪ್ರಸಾದ್ ಪಂಚಭೂತಗಳಲ್ಲಿ ಲೀನರಾದರು.
ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯ ಅಪಾರ್ಮೆಂಟ್ ನಲ್ಲಿ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಕೆ ಶರಣಾಗಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಕ್ರಿಯೆಯಾಗಿ ವಿಲ್ಸನ್ ಗಾರ್ಡನ್ ಚಿತಾಗಾರಕ್ಕೆ ಕೊಂಡೊಯ್ಯಲಾಯಿತು.
ಗುರುಪ್ರಸಾದ್ ಅವರ 2ನೇ ಪತ್ನಿ ಸುಮಿತ್ರಾ ಅವರ ಸಹೋದರರು ಅಂತಿಮ ವಿಧಿ ವಿಧಾನವನ್ನು ನೆರವೇರಿಸಿದರು. ಆ ಬಳಿಕ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಮಠ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಪಾರ್ತೀವ ಶರೀರದ ಅಂತ್ಯಕ್ರಿಯೆ ನೆರವೇರಿತು. ಈ ಮೂಲಕ ಡಾ.ರಾಜ್ ಕುಮಾರ್ ಅವರು ಮುಟ್ಟಿದ ಗಡ್ಡ ತೆಗೆಸದಂತ ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಇನ್ನೂ ನೆನಪು ಮಾತ್ರವೇ ಆಗಿದ್ದಾರೆ.
ಈ ಸಂದರ್ಭದಲ್ಲಿ ಗುರುಪ್ರಸಾದ್ ಅವರ 2ನೇ ಪತ್ನಿ ಸುಮಿತ್ರಾ, ಮೊದಲ ಪತ್ನಿ ಆರತಿ, ನಟ ದುನಿಯಾ ವಿಜಿ, ಡಾಲಿ ಧನಂಜಯ್, ನೀನಾಸಂ ಸತೀಶ್, ತಬಲ ನಾಣಿ, ಗುರುಪ್ರಸಾದ್ ಕುಟುಂಬಸ್ಥರು, ಸಂಬಂಧಿಕರು ಉಪಸ್ಥಿತರಾಗಿದ್ದರು.
BREAKING: ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಧಾರುಣವಾಗಿ ಸಾವು
ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ: ಆರ್.ಅಶೋಕ್