ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಕಂಬತ್ತನಹಳ್ಳಿ ಗ್ರಾಮದಲ್ಲಿ ಗೋಕುಂಟೆಗೆ ತೆರಳಿದ್ದಂತ ಮೂವರು ಅದರಲ್ಲೇ ಮುಳುಗಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ರಂಜಿತ್(27), ರಮ್ಯಾ (24) ಹಾಗೂ ಅಭಿಲಾಶ್ (21) ಎಂಬುದಾಗಿ ಗುರುತಿಸಲಾಗಿದೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಕಂಬತ್ತನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಊಟಕ್ಕೆ ಸಂಬಂಧಿಕರೆಲ್ಲರು ಸೇರಿದ್ದರು. ಊಟದ ನಂತ್ರ ಗೋಕುಂಟೆಯಲ್ಲಿ ಇಳಿದಾಗ ಮೂವರು ನೀರಿನಲ್ಲಿ ಮುಳುಗಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಪರೇಸಂದ್ರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ: ಆರ್.ಅಶೋಕ್
ಪ್ರಯಾಣಿಕರಿಗೆ ಗುಡ್ ನ್ಯೂಸ್: ಛತ್ ಪೂಜೆ ಹಬ್ಬಕ್ಕೆ ವಿಶೇಷ ರೈಲು ಸಂಚಾರ