ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಕೂಡ ನೆರವೇರಿಸಲಾಗಿದೆ. ಇದೀಗ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವರದಿ ಬಹಿರಂಗಗೊಂಡಿದ್ದು, ಅದರಲ್ಲಿ ಏನಿದೆ ಅಂತ ಮುಂದೆ ಓದಿ.
ಕನ್ನಡದ ಎದ್ದೇಳು ಮಂಜುನಾಥ, ಮಠ ಸಿನಿಮಾಗಳನ್ನು ನಿರ್ದೇಶಿಸಿದ್ದಂತ ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಸಾಲದ ಹೊಡೆತಕ್ಕೆ ಸಿಕ್ಕಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮೃತದೇಹ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಲ್ಲದೇ ಹಲವು ಅನುಮಾನಗಳಿಗೂ ಕಾರಣವಾಗಿತ್ತು.
ಮಾದನಾಯಕನಹಳ್ಳಿಯ ಅಪಾರ್ಮೆಂಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದಂತ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದರು.
ಇದೀಗ ವೈದ್ಯರ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಅದರಲ್ಲಿ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಅವರ ದೇಹಲು ಉಸಿರುಗಟ್ಟಿ ಮರಣಹೊಂದಿರುವುದಾಗಿ ತಿಳಿಸಿದೆ.
ವಕ್ಫ್ ವಿವಾದ: SIT ಇಲ್ಲವೇ CBI ತನಿಖೆಗೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ
ಬಾಲಿವುಡ್ ನಟ ಶಾರುಖ್ ಖಾನ್ ‘ಸಿಗರೇಟ್’ ತ್ಯಜಿಸುವುದಾಗಿ ಘೋಷಣೆ | Shah Rukh Khan