ಬೆಂಗಳೂರು:ವಕ್ಫ್ ವಿವಾದ ತೀವ್ರಗೊಂಡಿದ್ದು ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸುತ್ತಿದೆ. ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.ಉಪ ಚುನಾವಣೆ ಹೊತ್ತಲ್ಲಿ ಆಗುವ ಪ್ರತಿಭಟನೆಗೆ ರಾಜ್ಯ ಸರ್ಕಾರ ಕಂಗಾಲಾಗಿದೆ.
ಬಿಜೆಪಿಯ ಈ ನಡೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.ಇಂದು ರಾಜ್ಯಾದ್ಯಂತ ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿ ರಣಕಹಳೆ ಮೊಳಗಿಸಲಿದೆ. ಬಳ್ಳಾರಿಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ನಡೆಯಲಿದೆ. ವಕ್ಫ್ ಬೋರ್ಡ್ ಮತ್ತು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ.