ಹುಬ್ಬಳ್ಳಿ : ಅನುದಾನ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯ ಆಗಿದೆ.15ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ 11,495 ಸಾವಿರ ಕೋಟಿ ಅನ್ಯಾಯ ಆಗಿದೆ. 5,495 ಕೋಟಿ ವಿಶೇಷ ಅನುದಾನ ಕೊಡಬೇಕು ಅಂಥ ಹೇಳಿದ್ದರು.ಕೇಂದ್ರ ಈ ಅನುದಾನ ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟು ಬಿಡುತ್ತೇನೆ. ಅವರು ರಾಜಕೀಯ ಬಿಡುತ್ತಾರಾ? ಕೇಳಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.
ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷ 4.5 ಲಕ್ಷ ಕೋಟಿ ರೂ. ತೆರಿಗೆಯನ್ನು ರಾಜ್ಯದಿಂದ ಕೋಡುತ್ತಿದ್ದೇವೆ. ಆದರೆ ರಾಜ್ಯಕ್ಕೆ ಸಿಗುತ್ತಿರುವುದು 55-60 ಸಾವಿರ ಕೋಟಿ ರೂ. ಮಾತ್ರ. ಇದು ನ್ಯಾಯ ಏನ್ರೀ? ಇದನ್ನು ಕೇಳಿದ್ರೆ ರಾಜಕೀಯ ಅಂತಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಕಿಡಿ ಕಾರಿದರು.
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಂಸದ ಬೊಮ್ಮಾಯಿ ಮಾತನಾಡಿದ್ದಾರಾ? ನಾಲ್ಕೂವರೆ ಲಕ್ಷ ಕೋಟಿ ರೂ. ಕೊಟ್ಟು, 60 ಸಾವಿರ ಕೋಟಿ ತೆಗೆದುಕೊಳ್ಳುವುದು ಅನ್ಯಾಯ ಅಲ್ವೇ. ಹಣಕಾಸು ಆಯೋಗದ ಶಿಫಾರಸು ಆದಾರದ ಮೇಲೆ ಅನುದಾನ ಬರಬೇಕು, ಆದ್ರೆ ಅದನ್ನು ಕೊಡುತ್ತಿಲ್ಲ. ಬಿಜೆಪಿಯವರು ಯಾವತ್ತೂ ಅನುದಾನ ಕೊರತೆ ಬಗ್ಗೆ ಮಾತನಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.