ಬಳ್ಳಾರಿ : ರಾಜ್ಯದಲ್ಲಿ ಮೂರೂ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ, ಎಲ್ಲೆಡೆ ಪೊಲೀಸರು ತೀವ್ರ ಕಟ್ಟಚರ ವಹಿಸಿದ್ದು ಚೆಕ್ ಪೋಸ್ಟ್ ಗಳಲ್ಲಿ ಪ್ರತಿಯೊಂದು ವಾಹನ ಚೆಕ್ ಮಾಡುತ್ತಿದ್ದಾರೆ. ಈ ವೇಳೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜಿ ಬಸಾಪುರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 27 ಲಕ್ಷ ಹಣ ಜಪ್ತಿ ಮಾಡಿಕೊಳ್ಳಲಾಗಿದೆ.
ಇದೆ ನವೆಂಬರ್ 13ರಂದು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಈ ವೇಳೆ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 27 ಲಕ್ಷ 50 ಸಾವಿರ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜಿ ಬಸಾಪುರ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶದ ಗಡಿ ಭಾಗದ ಜಿ ಬಸಾಪುರ ಚೆಕ್ ಪೋಸ್ಟ್. ಹರಪನಹಳ್ಳಿ ಕಡೆಯಿಂದ ಬರುತ್ತಿದ್ದ ಕಾರನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.
ಈ ವೇಳೆ 27.50 ಲಕ್ಷ ಪತ್ತೆಯಾಗಿದೆ. 10 ಲಕ್ಷದವರೆಗೆ ಮಾತ್ರ ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಲು ಅವಕಾಶವಿರುವುದರಿಂದ ಆದಾಯ ತೆರಿಗೆ ಇಲಾಖೆಗೆ ಈ ಕೇಸ್ ಅನ್ನು ಚುನಾವಣಾ ಅಧಿಕಾರಿಗಳು ವರ್ಗಾಯಿಸಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಬಳಿ 27.50 ಲಕ್ಷ ಹಣ ಪತ್ತೆಯಾಗಿದೆ. ಹಾಗಾಗಿ ಈ ಒಂದು ಪ್ರಕರಣವನ್ನು ಐಟಿ ಇಲಾಖೆಗೆ ವರ್ಗಾಯಿಸಲಾಗಿದೆ. ಅಲ್ಲದೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.