ಬೀದರ್ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಜಾತ್ರೆಯಲ್ಲಿ ಭಾಗವಹಿಸಿದ್ದ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.1ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಲಿತ ಸಮುದಾಯದ ಹಲವು ಯುವಕರಿಗೆ ಗಾಯಗಳಾಗಿವೆ.
ನ.1ರಂದು ಹನುಮಾನ್ ದೇವರ ಜಾತ್ರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರು ಮತ್ತು ಸವರ್ಣೀಯರ ನಡುವೆ ವಾಗ್ವಾದ ನಡೆದಿದೆ. ಸವರ್ಣೀಯ ಯುವಕರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆಂದು ದಲಿತ ಯುವಕರು ಗಂಭೀರ ಆರೋಪ ಮಾಡಿದ್ದಾರೆ.ಕಟಕ ಚಿಂಚೋಳಿ ಪೊಲೀಸ್ ಠಾಣೆಗೆ ಯುವಕರು ದೂರು ನೀಡಿದ್ದು, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ಮನವಿ ಮಾಡಲಾಗಿದೆ.