ಬಳ್ಳಾರಿ : ಸಂಡೂರು ವಿಧಾನಸಭಾ ಉಪ ಚುನಾವಣೆಗೆ ನವೆಂಬರ್.13ರಂದು ಮತದಾನ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ನವೆಂಬರ್.11ರ ಸಂಜೆ 6ರಿಂದ ನವೆಂಬರ್.14ರ ಬೆಳಿಗ್ಗೆ 6 ಗಂಟೆಯವರೆಗೆ ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.13 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ರ್ತುಗಳು) ನಿಯಮಗಳು, 1967ರ ನಿಯಮ 10-ಬಿ ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಂಡೂರು ಕ್ಷೇತ್ರದಲ್ಲಿ ಹಾಗೂ ಈ ಕ್ಷೇತ್ರಕ್ಕೆ ಹೊಂದಿಕೊಂಡ ಕಂಪ್ಲಿ, ಕುರುಗೋಡು ಮತ್ತು ಬಳ್ಳಾರಿ ತಾಲ್ಲೂಕಗಳ 05 ಕಿ.ಮೀ ವ್ಯಾಪ್ತಿಯಲ್ಲಿ ನ.11 ರ ಸಂಜೆ 06 ಗಂಟೆಯಿಂದ ನ.14 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಮಾಜಿ ಸೈನಿಕರ ಗಮನಕ್ಕೆ: ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ, ಆರ್ಥಿಕ ಅನುದಾನಕ್ಕೆ ಅರ್ಜಿ ಆಹ್ವಾನ
ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates