ಬಳ್ಳಾರಿ: ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ಏಜೆನ್ಸಿ ವತಿಯಿಂದ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲಾಗುತ್ತಿದೆ ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ನಿಗಧಿಪಡಿಸಿದ ಬೆಂಬಲ ಬೆಲೆಯಂತೆ ಪ್ರತಿ ಕ್ವಿಂಟಾಲ್‌ಗೆ ರೂ.6789 ರಂತೆ ರೈತರಿಂದ ಖರೀದಿಸಲಾಗುತ್ತದೆ. ಜಿಲ್ಲೆಯ ವಿವಿಧೆಡೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಖರೀದಿ ಕೇಂದ್ರಗಳ ವಿಳಾಸ:
ಬಳ್ಳಾರಿ ಎಪಿಎಂಸಿ ಆಡಳಿತ ಕಚೇರಿ- ಈರೇಶ (ಮೊ.7353155205), ಬಳ್ಳಾರಿ ತಾಲ್ಲೂಕಿನ ಕಪ್ಪಗಲ್ಲು ಗ್ರಾಮದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ನಿಯಮಿತ- ಈರೇಶ (ಮೊ.7353155205), ಸಿರುಗುಪ್ಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಬಸವರಾಜ (ಮೊ.9845166601.
ಸಂಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಶಿವಲಿAಗಪ್ಪ (ಮೊ.9980676497), ಚೋರನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಮಲಿಯಪ್ಪ (ಮೊ.9945352466), ಕುರುಗೋಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ- ಹುಸೇನ್ ಸಾಬ (ಮೊ.8951307333), ಬಳ್ಳಾರಿ ಟಿಎಪಿಸಿಎಂಎಸ್-ನಾಗರಾಜ (ಮೊ.908841654).
ಬೇಕಾದ ದಾಖಲೆ:
ಆಧಾರ್‌ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಎಫ್‌ಐಡಿ ಕಡ್ಡಾಯ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ.
ರೈತರು ಒಣಗಿದ ಹಾಗೂ ಸ್ವಚ್ಛ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟ ಮಾಡಲು ತರಬೇಕು. ಶೇಂಗಾ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ನೋಂದಣಿ ಚೀಟಿಯನ್ನು ಪಡೆಯಬೇಕು. ನೋಂದಾಯಿಸಕೊಂಡ ರೈತರಿಂದ ಪ್ರತಿ ಎಕರೆಗೆ 03 ಕ್ವಿಂಟಾಲ್‌ನಿxದ ಗರಿಷ್ಠ 15 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು.
ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು, ರೈತರೇ ನೇರವಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ: ನ.11ರಿಂದ 14ರವರೆಗೆ ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ‘ಮದ್ಯ ಮಾರಾಟ’ ನಿಷೇಧ – DC ಆದೇಶ
BREAKING : ‘ತೀವ್ರ ಕಳವಳ’ : ಕೆನಡಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರಕ್ಕೆ ‘ಭಾರತ’ ಖಂಡನೆ