ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 5, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 16,382.52 ಗೌರವ ಸಂಭಾವನೆ ನೀಡಲಾಗುತ್ತದೆ.
ಗ್ರಾಮ ಪಂಚಾಯತವಾರು ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಮೀಸಲಾತಿ ವಿವರ ಹಾಗೂ ನಿಬಂಧನೆಗಳನ್ನು ತಿಳಿದುಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ ಫೋರ್ಟಲ್ https://zpdharwad.karnataka.gov.in ಗೆ ಅಥವಾ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ರೈತರ ಗಮನಕ್ಕೆ: ಬೆಳೆ ವಿಮೆಗೆ ನೋಂದಣಿ ಆರಂಭ, ತಪ್ಪದೇ ನೋಂದಾಯಿಸಿಕೊಳ್ಳಿ
ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates