ಹಾಸನ : ಹಸೆಮಣೆ ಎರಬೇಕಿದ್ದ ಕೆ ಎಸ್ ಐ ಎಸ್ ಎಫ್ ಕಾನ್ಸ್ಟೇಬಲ್ ಒಬ್ಬರನ್ನು ಬರ್ಬರ ಹತ್ಯೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ವಿ ಹರೀಶ್ (32) ಭೀಕರವಾಗಿ ಕೊಲೆಯಾಗಿದ್ದಾರೆ.ಮೃತ ಹರೀಶ್ ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಕೆ ಎಸ್ ಐ ಎಸ್ ಎಫ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. (KSISF) ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದರು.
ಇದೇ ನವೆಂಬರ್ 11ರಂದು ಹರೀಶ್ ಮದುವೆ ನಿಗದಿಯಾಗಿತ್ತು. ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ತೆರುಳುವಾಗ ಹರೀಶ್ ಅನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಾರಕಾಷ್ಟಗಳಿಂದ ಹಲ್ಲೆ ನಡೆಸಿ ಹರೀಶ್ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಹಾಸನದ ಎಸ್ಪಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಸನ ತಾಲೂಕಿನ ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.