ತುಮಕೂರು : ಹಾಸ್ಟೆಲಲ್ಲಿ ಊಟ ಸೇವಿಸಿ ಅಸ್ವಸ್ಥಗೊಂಡು 6ನೇ ತರಗತಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ ನಿನ್ನೆ ಈ ಒಂದು ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಹಾಸ್ಟೆಲಲ್ಲಿ ಅಸ್ವಸ್ಥಗೊಂಡಿದ್ದ ಅಭಿಲಾಶ್ (13) ಸಾವನ್ನಪ್ಪಿದ್ದಾನೆ. ಮಧ್ಯಾಹ್ನ ಊಟ ಮಾಡಿದ ಬಳಿಕ ಬಾಲಕ ಅಭಿಲಾಶ್ ಅಸ್ವಸ್ಥಗೊಂಡಿದ್ದ.
ಈ ವೇಳೆ ಸೂಕ್ತ ಚಿಕಿತ್ಸೆ ಸಿಗದೇ ಹಾಸ್ಟೆಲ್ ಕೊಠಡಿಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ.ಅಸ್ವಸ್ಥಗೊಂಡ ಅಭಿಲಾಷೆಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸದೆ ನಿರ್ಲಕ್ಷ ಮಾಡಿರುವ ಆರೋಪ ಕೇಳಿ ಬಂದಿದೆ. ಹಾಸ್ಟೆಲ್ ಪ್ರಾಂಶುಪಾಲ ಹಾಗೂ ವಾರ್ಡನ್ ವಿರುದ್ಧ ಪೋಷಕರು ಆರೋಪಿಸಿದ್ದಾರೆ. ಘಟನೆ ಕುರಿತಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.