ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಈ ಒಂದು ಹಗರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ನಿವಾಸದ ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಹೌದು ಮುಡಾದಲ್ಲಿ ನಡೆದಿರುವಂತಹ ಅಕ್ರಮ ನಿವೇಶನಗಳ ಮಾರಾಟ ಕುರಿತಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅಲ್ಲದೆ ಜಾರಿ ನಿರ್ದೇಶನಾಲಯಕ್ಕೂ ಅವರು ದೂರು ನೀಡಿದ್ದರು. ED ತನಿಖೆಯನ್ನು ಚುರುಕುಗೊಳಿಸಿ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಮೇಲೆ ಇತ್ತೀಚಿಗೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.
ಯಾವಾಗ ED ಅಧಿಕಾರಿಗಳು ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ನಿವಾಸದ ಮೇಲೆ ದಾಳಿ ಮಾಡಿದರೊ, ಅಂದು ಬೆಳಿಗ್ಗೆ ವಾಕಿಂಗ್ ಗೆ ಎಂದು ಹೋದವರು ತಮ್ಮ ಮನೆಯ ಮೇಲೆ ಇಡಿ ದಾಳಿ ಮಾಡಿದ್ದ ಕುರಿತು ಮಾಹಿತಿ ಪಡೆದು ತಕ್ಷಣ ಅಲ್ಲಿಂದಲೇ ನಾಪತ್ತೆಯಾಗಿದ್ದಾರೆ. ಇತ್ತ ಮುಡಾ ಆಯುಕ್ತರ ನಿವಾಸದಲ್ಲಿ ಸಿಸಿ ಕ್ಯಾಮೆರಾ ಡಿವಿಆರ್ ಕೂಡ ನಾಪತ್ತೆಯಾಗಿದೆ. ಸಿಸಿ ಕ್ಯಾಮೆರಾ ಡಿವಿಆರ್ ನಾಪತ್ತೆ ಬಗ್ಗೆ ಮುಡಾ ಅಧಿಕಾರಿಗಳು ದೂರು ನೀಡಿದ್ದಾರೆ. ಮೈಸೂರಿನ ಕುವೆಂಪುನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಆದರೆ ದೂರು ನೀಡಿದರೂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿಲ್ಲ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ನಿವಾಸದಲ್ಲಿ ಅಕ್ರಮ ನಡೆಯುತ್ತಿತ್ತು ಎಂದುಈ ಬಗ್ಗೆ ಮುಡಾ ಇಂಜಿನಿಯರ್ ದೂರು ನೀಡಿದ್ದಾರೆ. ಆಯುಕ್ತರ ನಿವಾಸದಲ್ಲೇ ಅಕ್ರಮ ನಡೆಯುತ್ತಿತ್ತು ಎಂಬ ಆರೋಪವಿತ್ತು. ಇದೀಗ ಸಿಸಿ ಕ್ಯಾಮೆರಾ ಹಾಗೂ ಡಿವಿಆರ್ ನಾ ಪತ್ತೆ ಪ್ರಕರಣ ಸಾಕಷ್ಟು ಅನುಮಾನ ಮೂಡಿಸಿದೆ