ಹುಬ್ಬಳ್ಳಿ: ನಾನು ನಾಳೆ ಬೆಳಿಗ್ಗೆ 10 ಗಂಟೆಗೆ ಮುಡಾ ಹಗರಣ ಸಂಬಂಧ ಲೋಕಾಯುಕ್ತದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಹೀಗಾಗಿ ನಾನು ನಾಳೆ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಮುಡಾ ಕಚೇರಿಗೆ ತೆರಳಲಿದ್ದೇನೆ ಎಂದರು.
ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣಾಧಿಕಾರಿಗಳ ಮುಂದೆ ವಿಚಾರಣೆ ಎದುರಿಸಲಿದ್ದೇನೆ. ಅವರು ಕೇಳುವಂತ ಪ್ರಶ್ನೆಗಳಿಗೂ ಉತ್ತರಿಸುವುದಾಗಿ ತಿಳಿಸಿದರು.
BIG NEWS : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ‘CBI’ ತನಿಖೆಯ ಭೀತಿ : ಕೆಲವೇ ಕ್ಷಣಗಳಲ್ಲಿ ವಿಚಾರಣೆ ಆರಂಭ!
BREAKING : ತುಮಕೂರಲ್ಲಿ ಘೋರ ದುರಂತ : ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ದಾರುಣ ಸಾವು!