ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು, ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿ ಅದೇಶಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಇತರೆ ಆರೋಪಗಳಿಗೆ ಆಕ್ಷೇಪಣೆಗಳು ಸಲ್ಲಿಸುದಿದ್ದರೆ ಸಲ್ಲಿಸಿ ಎಂದು ಹೈಕೋರ್ಟ್ ನೋಟಿಸ್ ನೀಡಿದೆ.
ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ,ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜುಗೂ ಕೂಡ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ನೋಟಿಸ್ ನೀಡಿದೆ. ಆಕ್ಷೇಪಣೆ ಸಲ್ಲಿಸುವದಿದ್ದರೆ ಸಲ್ಲಿಸಿ 10 ದಿನಗಳ ನಂತರ ಅರ್ಜಿಯ ವಿಚಾರಣೆ ಸೂಚನೆ ನೀಡಿದೆ.
ಮುಡಾ ಕೇಸ್ನಲ್ಲಿ ಸಿಬಿಐ ತನಿಖೆಗೆ ಕೋರಿದ ಅರ್ಜಿಯ ವಿಚಾರಣೆ ಇಂದು ಹೈ ಕೋರ್ಟ್ ನಲ್ಲಿ ನಡೆಯಿತು. ನವೆಂಬರ್ 26ಕ್ಕೆ ಹೈಕೋರ್ಟ್ ಅರ್ಜಿ ವಿಚಾರಣೆ ಮುಂದೂಡಿತು. ರಾಜ್ಯ ಅಭಿಯೋಜಕ ಬಿ ಎನ್ ಜಗದೀಶ್ ಅವರು 2 ವಾರ ಕಾಲಾವಕಾಶ ಕೋರಿದ್ದರಿಂದ ವಿಚಾರಣೆಯನ್ನು ನವೆಂಬರ್ 26 ಕ್ಕೆ ಹೈಕೋರ್ಟ್ ಮುಂದೂಡಿದೆ. ಅಲ್ಲಿಯವರೆಗೆ ನಡೆಸಿದ ತನಿಖೆಯ ವಿವರ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ. ನವೆಂಬರ್ 25 ರವರೆಗೆ ನಡೆದಿರುವ ತನಿಖೆಯ ವಿವರ ಒದಗಿಸಲು ಸೂಚನೆ ನೀಡಿದೆ.