ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಾಳೆ ಮೈಸೂರು ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಯಾಗಿ ಅವರು ವಿಚಾರಣೆಗೆ ಹಾಜರಾಗುತ್ತಾರೋ ಅಥವಾ ಆರೋಪಿಯಾಗಿ ವಿಚಾರಣೆಗೆ ಹಾಜರಾಗುತ್ತಾರೊ ನೋಡೋಣ ಅಲ್ಲದೆ ಖರ್ಗೆ ಡಿಸಿಎಂ ಅಡಿಕೆ ಶಿವಕುಮಾರ್ ಸಿಎಂ ರಾಜ ನಮಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ವರಿಷ್ಠರೇ ಈ ಕುರಿತು ನಿರ್ಧಾರ ಮಾಡಿದ್ದು, ಮುಹೂರ್ತ ಸಮಯ ಎಲ್ಲವನ್ನು ನಿಗದಿ ಮಾಡಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಶೀಘ್ರದಲ್ಲಿ ರಾಜೀನಾಮೆ ನೀಡುವುದು ಶತಸಿದ್ಧ. ಬೇಜವಾಬ್ದಾರಿ ಮಂತ್ರಿ ಜಮೀರ್ ಅಹ್ಮದ್ ಇಟ್ಕೊಂಡು ಮಠ ಮಾನ್ಯ ರೈತರ ಜಮೀನು ಹೊಡೆಯುವ ಯತ್ನ ನಡೆಯುತ್ತಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯರ ಕುಮ್ಮಕ್ಕು ಸಹ ಇದೆ ಎಂದರು.
ಸಿಎಂ ಸಿದ್ದರಾಮಯ್ಯ ಕುಟುಂಬವೇ ಎಂದು ಆರೋಪಿ ಸ್ಥಾನದಲ್ಲಿ ಇದೆ.ಸಿಎಂ ಸಿದ್ದರಾಮಯ್ಯ ಯಾವಾಗಲೋ ರಾಜೀನಾಮೆ ಕೊಡಬೇಕಿತ್ತು. ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸಿದ್ಧ. 5 ವರ್ಷ ಸಿಎಂ ಆಗಿರುತ್ತೇನೆ ಎಂದು ಹೇಳಲಿ ನೋಡೋಣ. ಸಿದ್ದರಾಮಯ್ಯ ರಾಜ್ಯದ ಜನತೆಗೆ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.
ಹಾಗೆ ಹೇಳಲು ಸಿದ್ದರಾಮಯ್ಯ ಅವರಿಗೆ ಸಾಧ್ಯವೇ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಡಿಕೆ ಶಿವಕುಮಾರ್ ಎಲ್ಲರೂ ಚರ್ಚಿಸಿದ್ದಾರೆ. ಸಿಎಂ ರಾಜೀನಾಮೆ ಮುಹೂರ್ತ ಸಿದ್ಧ ಮಾಡಿದ್ದಾರೆ ಯಾವಾಗ ರಾಜೀನಾಮೆ ಅಂತ ಸಿಎಂ ಹೇಳಬೇಕು. ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಶತಸಿದ್ಧ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಇದನ್ನ ನಾನು ಹೇಳುತ್ತಿದ್ದೇನೆ ಎಂದು ತಿಳಿಸಿದರು.