Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇರಾನ್-ಇಸ್ರೇಲ್ ಸಂಘರ್ಷ: ನವದೆಹಲಿಯಲ್ಲಿ ದಿನದ 24 ಗಂಟೆಯೂ ನಿಯಂತ್ರಣ ಕೊಠಡಿ ಸ್ಥಾಪನೆ | Israel-Iran conflict

17/06/2025 8:59 AM

BREAKING : ಹರಿಯಾಣದಲ್ಲಿ ರೂಪದರ್ಶಿಯ ಕತ್ತು ಸೀಳಿ ಬರ್ಬರ ಹತ್ಯೆ ಕೇಸ್ : ಆರೋಪಿ ಅರೆಸ್ಟ್

17/06/2025 8:59 AM

BREAKING : ಬೆಂಗಳೂರಿನ ವಿಧಾನಸೌಧದಲ್ಲಿ `ಪರಿಸರ ನಡಿಗೆ’ಗೆ ಚಾಲನೆ ನೀಡಿದ DCM ಡಿ.ಕೆ.ಶಿವಕುಮಾರ್ | WATCH VIDEO

17/06/2025 8:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ
KARNATAKA

ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ

By kannadanewsnow0905/11/2024 7:11 PM

ಬೆಂಗಳೂರು : ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿದೆ.

ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಇವಿ ಚಾರ್ಚಿಂಗ್‌ ಸೇವೆ ಒದಗಿಸುವ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇವಿ ಉದ್ಯಮದ ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ನಮ್ಮದಾಗಿದ್ದು, ಒಟ್ಟು 5,765 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. 5,765 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿರುವ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ, 3,728 ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ- 1,989 ಮತ್ತು ದಿಲ್ಲಿ- 1,941 ಚಾರ್ಜಿಂಗ್ ಸ್ಟೇಷನ್ ಗಳೊಂದಿಗೆ ನಂತರದ ಸ್ಥಾನದಲ್ಲಿವೆ.

ದೇಶದ ಪ್ರಮುಖ ನಗರಗಳಲ್ಲಿ ಇವಿ ಬಳಕೆದಾರರ ಸಂಖ್ಯೆ ಹೆಚ್ಚಿದ್ದರೂ, ರಾಜ್ಯ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಇವಿ ಬಳಕೆದಾರರಿದ್ದಾರೆ. ಅದಕ್ಕೆ ಪೂರಕವಾಗಿ ಸರ್ಕಾರ ಅಗತ್ಯ ಮೂಲ ಸೌಕರ್ಯ ಒದಗಿಸಿದೆ. ಇವಿ ಚಾರ್ಜಿಂಗ್ ಸ್ಟೇಷನ್ ವಿಚಾರದಲ್ಲಿ ಬೆಂಗಳೂರು ನಗರವು ಮುಂಚೂಣಿಯಲ್ಲಿದ್ದು, ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಇದು ರಾಜ್ಯದ ಒಟ್ಟಾರೆ ಇವಿ ಚಾರ್ಜಿಂಗ್‌ ಸ್ಟೇಷನ್‌ಗಳ ಪೈಕಿ ಶೇ. 85ರಷ್ಟು.

ಇವಿ ಚಾರ್ಚಿಂಗ್‌ ಸ್ಟೇಷನ್‌ಗಳ ಜತೆಗೆ ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್‌ ಸೌಲಭ್ಯ ಒದಗಿಸುವಲ್ಲಿ ‘ಇವಿ ಮಿತ್ರ’ ಆ್ಯಪ್‌ ಪಾತ್ರವೂ ದೊಡ್ಡದು. ಆ್ಯಂಡ್ರಾಯ್ಡ್ ಮತ್ತು ಐಓಎಸ್‌ ಎರಡು ಮೊಬೈಲ್‌ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್‌- ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಚಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಚಿಂಗ್ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ. ರಿಟೇಲ್‌ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಲಭ್ಯವಿದೆ.

ಇವಿ ಸ್ಟೇಷನ್‌ಗಳ ವಿವರ:

ರಾಜ್ಯದಲ್ಲಿರುವ ಒಟ್ಟು ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 5765
ಬೆಸ್ಕಾಂ ಸ್ಥಾಪಿಸಿರುವ ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 195
ಇತರ ಎಸ್ಕಾಂಗಳು ಸ್ಥಾಪಿಸಿರುವ ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 70
ಸರ್ಕಾರದ ಇತರ ಇಲಾಖೆಗಳು ಸ್ಥಾಪಿಸುರವ ಚಾರ್ಚಿಂಗ್ ಸ್ಟೇಷನ್‌ಗಳು: 21
ಖಾಸಗಿ ಚಾರ್ಚಿಂಗ್ ಸ್ಟೇಷನ್‌ಗಳು: 5479

ಇಂಧನ ಸಚಿವ ಕೆಜೆ ಜಾರ್ಜ್ ಅವರು “ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ಬದ್ಧತೆಗೆ ಸಂದ ಪ್ರಶಸ್ತಿ ಇದು. ಖಾಸಗಿ ಪ್ರಾಬಲ್ಯಕ್ಕೆ ಅವಕಾಶ ಕೊಡೆದೇ, ಇವಿ ಬಳಕೆದಾರರಿಗೆ ಕಡಿಮೆ ವೆಚ್ಚದಲ್ಲಿ ಚಾರ್ಚಿಂಗ್‌ ಮೂಲ ಸೌಕರ್ಯ ಒದಗಿಸುವಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನದಲ್ಲಿದೆ. ಇದು ನಿಜಕ್ಕೂ ಹೆಮ್ಮೆಯ ಸಂಗತಿ. ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ 2024ರ ರಾಜ್ಯ ಬಜೆಟ್‌ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರಾಜ್ಯಾದ್ಯಂತ ಸುಮಾರು 2,500 ಹೊಸ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇದೆ ಎಂದಿದ್ದಾರೆ.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬಿಳಗಿ ಅವರು “ರಾಜ್ಯದಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯವನ್ನು ಕಲ್ಪಿಸುವ ನೋಡೆಲ್‌ ಏಜೆನ್ಸಿಯಾಗಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ ಪ್ರಶಸ್ತಿ ಸಂದಿರುವುದು ಅತ್ಯಂತ ಹೆಮ್ಮೆ ಸಂಗತಿ. ಇದು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಕರ್ನಾಟಕ ದಿಕ್ಸೂಚಿಯಾಗಿದ್ದು, ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್‌ ವಾಹನಗಳಿಗೆ ಚಾರ್ಚಿಂಗ್‌ ಸೌಲಭ್ಯ ಕಲ್ಪಿಸುವಲ್ಲಿ ಕರ್ನಾಟಕ ದೇಶದಲ್ಲೇ ಅಗ್ರ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ ಬಿಬಿಎಂಪಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 5,500 ಕೆಜಿ ಪ್ಲಾಸ್ಟಿಕ್ ಜಪ್ತಿ, 45 ಸಾವಿರ ದಂಡ

ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ‘2 ಲಕ್ಷ ಸಾಲ’ ಲಭ್ಯ, ನೀವೂ ಅರ್ಜಿ ಸಲ್ಲಿಸಿ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ವಿಧಾನಸೌಧದಲ್ಲಿ `ಪರಿಸರ ನಡಿಗೆ’ಗೆ ಚಾಲನೆ ನೀಡಿದ DCM ಡಿ.ಕೆ.ಶಿವಕುಮಾರ್ | WATCH VIDEO

17/06/2025 8:53 AM1 Min Read

BREAKING : ರಾಜ್ಯದಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

17/06/2025 8:20 AM1 Min Read

BIG NEWS : `SSLC’ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

17/06/2025 8:16 AM1 Min Read
Recent News

BREAKING: ಇರಾನ್-ಇಸ್ರೇಲ್ ಸಂಘರ್ಷ: ನವದೆಹಲಿಯಲ್ಲಿ ದಿನದ 24 ಗಂಟೆಯೂ ನಿಯಂತ್ರಣ ಕೊಠಡಿ ಸ್ಥಾಪನೆ | Israel-Iran conflict

17/06/2025 8:59 AM

BREAKING : ಹರಿಯಾಣದಲ್ಲಿ ರೂಪದರ್ಶಿಯ ಕತ್ತು ಸೀಳಿ ಬರ್ಬರ ಹತ್ಯೆ ಕೇಸ್ : ಆರೋಪಿ ಅರೆಸ್ಟ್

17/06/2025 8:59 AM

BREAKING : ಬೆಂಗಳೂರಿನ ವಿಧಾನಸೌಧದಲ್ಲಿ `ಪರಿಸರ ನಡಿಗೆ’ಗೆ ಚಾಲನೆ ನೀಡಿದ DCM ಡಿ.ಕೆ.ಶಿವಕುಮಾರ್ | WATCH VIDEO

17/06/2025 8:53 AM

ಉದ್ಯಮಕ್ಕೆ ಕಾಲಿಟ್ಟ ಟ್ರಂಪ್ ಕುಟುಂಬ, ‘T 1 ಮೊಬೈಲ್ ಬಿಡುಗಡೆ | Trump family launches T1 mobile

17/06/2025 8:53 AM
State News
KARNATAKA

BREAKING : ಬೆಂಗಳೂರಿನ ವಿಧಾನಸೌಧದಲ್ಲಿ `ಪರಿಸರ ನಡಿಗೆ’ಗೆ ಚಾಲನೆ ನೀಡಿದ DCM ಡಿ.ಕೆ.ಶಿವಕುಮಾರ್ | WATCH VIDEO

By kannadanewsnow5717/06/2025 8:53 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯ ಅರಣ್ಯ, ಪರಿಸರ ವಿಜ್ಞಾನ ಮತ್ತು ಪರಿಸರ ಸಚಿವ…

BREAKING : ರಾಜ್ಯದಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

17/06/2025 8:20 AM

BIG NEWS : `SSLC’ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

17/06/2025 8:16 AM

ಗಮನಿಸಿ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ

17/06/2025 8:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.