ಬೆಂಗಳೂರು : ಸರ್ಕಾರಿ ನೌಕರನು ಸೇವೆಯಲ್ಲಿ ಎಸಗುವ ಅಪರಾಧಗಳ ಕುರಿತು ವಿಚಾರಣೆ ನಡೆಸಿ, ಸಾಬೀತಾದ ಪ್ರಕರಣಗಳಲ್ಲಿ ಆರೋಪಿ ನೌಕರನಿಗೆ ವಿಧಿಸಬಹುದಾದಂತಹ ದಂಡನೆಗಳ ಬಗ್ಗೆ ಕರ್ನಾಟಕ ಸಿವಿಲ್ ಸೇವಾ ನಿಯಮದಲ್ಲಿ ನಿರ್ದಿಷ್ಟಪಡಿಸಲಾಗಿದೆ.
ಆದರೆ, ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ಎಂಬುದನ್ನು ನಿಗದಿಪಡಿಸಿರುವುದಿಲ್ಲ. ಇದರಿಂದಾಗಿ ಕೆಲವು ಸಂದರ್ಭಗಳಲ್ಲಿ ಆರೋಪದ ತೀವ್ರತೆಗಿಂತ ವಿಧಿಸಲಾದ ದಂಡನೆಗಳು ಕಡಿಮೆ ಅಥವಾ ಹೆಚ್ಚಿನದಾಗುವ/ಹೊಂದಿದ ಆರೋಪಗಳ ಶಿಸ್ತು ಪ್ರಾಧಿಕಾರಿಗಳು, ಹೋಲಿಸಬಹುದಾದಂತಹ ತೀವ್ರತೆಯನ್ನು ಹೊಂದಿದ ಆರೋಪಗಳ ಪ್ರಕರಣಗಳಲ್ಲಿ ಬೇರೆ ಬೇರೆ ದಂಡನೆಗಳನ್ನು ವಿಧಿಸುವ ಸಾಧ್ಯತೆಯೂ ಇರುತ್ತದೆ. ಆದುದರಿಂದ, ಸರ್ಕಾರವು ಇದನ್ನು ಕೂಲಂಕುಷವಾಗಿ ಪರಿಶೀಲಿಸಿ ಸಾಬೀತಾದಂತಹ ಆರೋಪಗಳಿಗನುಗುಣವಾಗಿ ವಿಧಿಸಬಹುದಾದ ದಂಡನೆಗಳ ಉದಾಹರಣೆಗಳನ್ನು ಈ ಕೆಳಗೆ ನೀಡಲಾಗಿದೆ.