ಬೆಂಗಳೂರು : ಮುಡಾ ಹಗರಣ ಸಂಬಂಧ ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದೆ.
ಇಂದು ಬೆಂಗಳೂರಿನಿಂದ ಮೈಸೂರಿಗೆ ಖಾಸಗಿ ಕಾರಿನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕೆಲವೇ ಕ್ಷಣಗಳಲ್ಲಿ ಮುಡಾ ಹಗರಣ ಸಂಬಂಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಮೈಸೂರಿಗೆ ಆಗಮಿಸಿದ್ದಾರೆ. ಬಿಳಿ ಬಣ್ಣದ ಇನ್ನೋವಾ ಕಾರಿನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಸಚಿವ ಹೆಚ್.ಸಿ. ಮಹದೇವಪ್ಪ ಸ್ವಾಗತಿಸಿದ್ದಾರೆ.