ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
#WATCH | Karnataka CM Siddaramaiah arrives at Government House in Mysuru.
He has been asked to appear before the Lokayukta police in Mysuru today for an inquiry over the alleged irregularities in the Mysuru Urban Development Authority (MUDA) scam. pic.twitter.com/WcW5Uy43GI
— ANI (@ANI) November 6, 2024
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.