ಬೆಂಗಳೂರು : ಮುಡಾ ಹಗರಣ ಸಂಬಂಧ ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ರಾಮಯ್ಯ ವಿಚಾರಣೆಗೆ ಹಾಜರಾಗಿದ್ದು, ವಿಪಕ್ಷ ನಾಯಕ ಆರ್. ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ಲೋಕಾಯುಕ್ತ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಲೋಕಾಯುಕ್ತ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದ್ದು, ಸಿದ್ದರಾಮಯ್ಯ ಇಂದು ವಿಚರಣೆಗೆ ಹೋಗಿದ್ದಾರೆ. ಇದನ್ನು ನೋಡಿ ನಮಗೆ ನಾಚಿಕೆ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ 40 ವರ್ಷದ ರಾಜಕೀಯ ಜೀವನ ತೆರೆದ ಪುಸ್ತಕ ಎಂದು ಹೇಳಿದರು, ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ತಮ್ಮ ಕೈಕೆಳಗಿನ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾಗಿದ್ದಾರೆ. 16 ತಿಂಗಳಿನಿಂದ ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ. ನಿತ್ಯ ಒಬ್ಬರಲ್ಲ ಒಬ್ಬರು ಮಂತ್ರಿ ಲೂಟಿ ಹೊಡೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.