ಬೆಂಗಳೂರು : ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದು, ಲೋಕಾಯುಕ್ತ ವಿಚಾರಣೆಗೆ ಮುನ್ನ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ಅಧಿಕಾರಿಗಳಿಗೆ ತಮ್ಮ ಆಧಾರ್ ಕಾರ್ಡ್ ತೋರಿಸಿದ್ದು, ಬಳಿಕ ತನಿಖಾಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಸಾಮಾನ್ಯರಂತೆ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ವಿಚಾರಣೆ ನಡೆಸುತ್ತಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.