ರಾಮನಗರ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ ವಿಚಾರಣೆ ಎದುರಿಸಿದ್ದರು.ಈ ವೇಳೆ ನಗುಮುಖದಿಂದಲೇ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಹೊರ ಬಂದಿದ್ದಾರೆ. ಬೆಳಿಗ್ಗೆ 10 ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಸತತ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮಧ್ಯಾಹ್ನ 12 ಗಂಟೆಗೆ ಲೋಕಾಯುಕ್ತ ಕಚೇರಿಯಿಂದ ವಾಪಸ್ ತೆರಳಿದ್ದಾರೆ.
ಲೋಕಾಯುಕ್ತ ವಿಚಾರಣೆ ಎದುರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ನೇರವಾಗಿ ಚನ್ನಪಟ್ಟಣ ಕ್ಷೇತ್ರಕ್ಕೆ ತೆರಳಿದ್ದಾರೆ, ಚನ್ನಪಟ್ಟಣದ ಬೇಗೂರಿಗೆ ಆಗಮಿಸಿದಮದ್ದು, ಸಿಪಿ ಯೋಗೇಶ್ವರ್ ಪರ ಮತಯಾಚಿಸಲಿರುವ ಸಿಎಂ ಸಿದ್ದರಾಮಯ್ಯ, ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಪರವಾಗಿ ಅವರು ಮತಯಾಚನೆ ಮಾಡಲಿದ್ದಾರೆ.
ಲೋಕಾಯುಕ್ತ ಕಚೇರಿಯಲ್ಲಿ ಸತತವಾಗಿ 2 ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ಕೇಳಿದ ಪ್ರತಿಯೊಂದು ಪ್ರಶ್ನೆಗೂ ಸಿಎಂ ಸಿದ್ದರಾಮಯ್ಯ ಯಾವುದೇ ಭಯವಿಲ್ಲದೆ ಉತ್ತರಿಸಿದ್ದಾರೆ. ವಿಚಾರಣೆ ಅಂತ್ಯವಾದ ಬಳಿಕ ನಗುಮುಖದಿಂದಲೇ ಅವರು ಕಚೇರಿಯಿಂದ ಹೊರಗಡೆ ಆಗಮಿಸಿದ್ದಾರೆ. ನಂತರ ಅಲ್ಲಿಂದ ನೇರವಾಗಿ ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ ತೆರಳಿದ್ದು ಇಂದು ಬೇಗೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರವಾಗಿ ಮತಯಾಚನೆ ಮಾಡಲಿದ್ದಾರೆ.