ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಅವರಿಗೆ ಬೆದರಿಕೆ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರ್, ಶಾಸಕ ಸುರೇಶ್ ಬಾಬು ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಎಫ್ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಮಾನಹಾನಿ ಹೇಳಇಕೆ ನೀಡಿದ್ದಾರೆ. ಅಲ್ಲದೇ ತನಗೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ಬೆಂಗಳೂರಿನ ಸಂಜಯ್ ನಗರ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರ್ ಹಾಗೂ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಈ ಎಫ್ಐಆರ್ ರದ್ದುಕೋರಿ, ಹೆಚ್ ಡಿಕೆ, ನಿಖಿಲ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ.
ಲೋಕಾಯುಕ್ತ ವಿಚಾರಣೆ ವೇಳೆ ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: ಸಿಎಂ ಸಿದ್ಧರಾಮಯ್ಯ
ಬೆಳಗಾವಿಯಲ್ಲಿ ‘SDA ರುದ್ರಣ್ಣ’ ಆತ್ಮಹತ್ಯೆ ಕೇಸ್: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಹೇಳಿದ್ದೇನು ಗೊತ್ತಾ.?