ರಾಮನಗರ : ಚನ್ನಪಟ್ಟಣ ಚುನಾವಣೆಯ ತೀವ್ರ ರಂಗೇರಿದ್ದು ಇದೀಗ ಪರಸ್ಪರ ನಾಯಕರುಗಳ ವಾಕ್ಸಮರ ತಾರಕಕ್ಕೆ ಏರಿದೆ. ಇಂದು ಮಾಜಿ ಸಂಸದ ಡಿಕೆ ಸುರೇಶ್ ಅವರು ಈ ಹಿಂದೆ ಎಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿರುವಂತಹ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. ಈ ಕುರಿತಾಗಿ ಎಚ್ ಡಿ ಕುಮಾರಸ್ವಾಮಿ ಇದು ನಾನು ವಿಧಾನಸೌಧದಲ್ಲಿ ಮಾತನಾಡಿರುವ ಹಳೆಯ ವಿಡಿಯೋ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ವಿಧಾನಸಭೆಯಲ್ಲಿ ಮಾತನಾಡಿದ್ದು, ಒಂದು ವಾರದಿಂದ ಅದನ್ನು ಕಟಿಂಗ್ ಮಾಡಿ ಹಂಚುತ್ತಿದ್ದಾರೆ. ಅದು ನನ್ನ ಹೇಳಿಕೆಯಲ್ಲ. ವಾಸ್ತವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೆ. ಪಕ್ಕದ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಹೇಳಿದ್ದೆ. ಇಸ್ಪೀಟ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವವರು 5 ವರ್ಷ ಅವರು ಕೆಲಸ ಮಾಡಲಿ. ನಾನು ಎರಡು ದಿನದಲ್ಲಿ ಬದಲಾವಣೆ ಮಾಡುತ್ತೇನೆ ಅಂದ ವಿಚಾರದ ಬಗ್ಗೆ ಹೇಳಿದ್ದೆ. ಅದನ್ನು ಮದ್ದೂರು ವಿಷಯಕ್ಕೆ ಹೇಳಿದ್ದು ಎಂದು ಸ್ಪಷ್ಟಪಡಿಸಿದರು.
ಹಾಸನದಲ್ಲೂ ಇದಕ್ಕಿಂತ ಕೆಟ್ಟದಾಗಿ ಮಾಡಿದರು. ನನ್ನ ಮೇಲೆ ಹೇಳಲು ಏನು ಇಲ್ಲವಲ್ಲ ಅದಕ್ಕೆ. ಯೋಗೇಶ್ವರ ಸಂಸ್ಕೃತಿ ಎಲ್ಲರಿಗೂ ಗೊತ್ತಿದೆ. ಇವರೆಲ್ಲಾ ಸಿಡಿ ಪ್ಲೈಯರ್ಸ್ ಆ ಸಂತತಿಯಲ್ಲಿ ಬಂದವರು. ಇದಕ್ಕೆಲ್ಲಾ ನಮ್ಮ ಜನ ಬೆಲೆ ಕೊಡುತ್ತಾರಾ ? ನಾನು ಅಭಿವೃದ್ಧಿ ವಿಚಾರ ಇಟ್ಟುಕೊಂಡು ಹೊರಟಿದ್ದೇನೆ. ಅವರು ಏನೇ ಮಾತನಾಡಿದರೂ ಚನ್ನಪಟ್ಟಣದ ಜನ 13ಕ್ಕೆ ಉತ್ತರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆಡಿಯೋದಲ್ಲಿ ಏನಿದೆ?
ಮಾಜಿ ಸಂಸದ ಡಿಕೆ ಸುರೇಶ್ ಅವರು ಬಿಡುಗಡೆ ಮಾಡಿರುವ ಎಚ್ಡಿ ಕುಮಾರಸ್ವಾಮಿ ಅವರ ಹಳೇ ಆಡಿಯೋದಲ್ಲಿ ಅಭಿವೃದ್ಧಿ ಗೆ ಜನ ಮತ ಹಾಕಲ್ಲ, ಎಂಟು ದಿನದ ಹಿಂದೆ ಜನರ ಬಳಿ ಹೋಗಬೇಕು. ಚುನಾವಣಾ ತಂತ್ರ ಮಾಡಬೇಕು. ಜನರ ಬಳಿ ಹೆಚ್ಚು ಹೋಗಬಾಗರದು, 8 ದಿನದಲ್ಲಿ ಪ್ರಚಾರ ಮಾಡಬೇಕು ಎಂದು ಆಗಿನ ಸಿಎಂ ಆಗಿದ್ದ ಕುಮಾರಸ್ವಾಮಿ ಹೇಳಿದ್ರು ಎಂದು ವ್ಯಂಗ್ಯವಾಡಿದ್ದಾರೆ.