ಬೆಂಗಳೂರು: ಪಿಎಸ್ಐ ಪರೀಕ್ಷೆಯ ಪತ್ರಿಕೆ-1 ಮತ್ತು 2ರಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ವಿವರ ಇರುವ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ಪ್ರಕಟಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ದಿನಾಂಕ 03-10-2024ರಂದು ನಡೆದ ಪಿಎಸ್ಐ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ ತಾತ್ಕಾಲಿಕ ಅಂಕಪಟ್ಟಿಯನ್ನು https://cetonline.karnataka.gov.in/vaoresult/resultdescomr.aspx ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದಿದೆ.
ಅಭ್ಯರ್ಥಿಗಳು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಿರುವ ಲಿಂಕ್ ಮೂಲಕ ದಿನಾಂಕ 09-11-2024ರ ಸಂಜೆ 5.30ರ ಒಳಗಾಗಿ ಸಲ್ಲಿಸಬಹುದು. ಬೇರೆ ಯಾವುದೇ ಇತರೆ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದಿದೆ.
ಇನ್ನೂ ವಿಶೇಷ ಸೂಚನೆ ಎನ್ನುವಂತೆ ದಿನಾಂಕ 06-11-2024ರಂದು ಪ್ರಕಟಿಸಿರುವ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಮಾತ್ರ ಲಿಂಕ್ ಮೂಲಕ ಸಲ್ಲಿಸುವುದು. ಈಗಾಗಲೇ ಕೀ ಉತ್ತರಗಳನ್ನು ಅಂತಿಮಗೊಳಿಸಿದ್ದು, ಕೀ ಉತ್ತರಗಳಇಗೆ ಯಾವುದೇ ಆಕ್ಷೇಪಣೆಗಳ್ನು ಸಲ್ಲಿಸಿದರೂ ಪರಿಗಣಿಸುವುದಿಲ್ಲ ಎಂದಿದೆ.
ರಾಜ್ಯದಲ್ಲಿ ‘ಮಾನಸಿಕ ಆರೋಗ್ಯ’ಕ್ಕಾಗಿ ‘ಟೆಲಿ ಮನಸ್ ಸಹಾಯವಾಣಿ’ ಆರಂಭ: ಯಾರು ಕರೆ ಮಾಡಬಹುದು.?
ಬೆಂಗಳೂರಿನ ಜಯದೇವ ಆಸ್ಪತ್ರೆಯ ಶೌಚಾಲಯದಲ್ಲಿ ಮೊಬೈಲ್ ಫೋನ್ ಇಟ್ಟಿದ್ದ ‘ಗುತ್ತಿಗೆ ನೌಕರ’ ಅಮಾನತು