ಚಿತ್ರದುರ್ಗ : ಕಳೆದ ಅಕ್ಟೋಬರ್ ಮಾಹೆಯಲ್ಲಿ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಕಳೆದ ಅಕ್ಟೋಬರ್ ಮಾಹೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಉಂಟಾದ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷಾ ತಂಡವು ಸ್ಥಳ ಪರಿಶೀಲನೆ ನಡೆಸಿ, ಬೆಳೆ ಹಾನಿ ಕ್ಷೇತ್ರಗಳ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಒಟ್ಟು 914.45 ಹೆಕ್ಟೇರ್ ಕೃಷಿ ಬೆಳೆ ಹಾಗೂ 241.80 ತೋಟಗಾರಿಕೆ ಬೆಳೆ ಸೇರಿ ಒಟ್ಟು 1,156.25 ಹೆಕ್ಟೇರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 172.77 ಹೆಕ್ಟೇರ್ ಕೃಷಿ, 94.50 ತೋಟಗಾರಿಕೆ ಸೇರಿ 267.27 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 478.47 ಹೆಕ್ಟೇರ್ ಕೃಷಿ ಬೆಳೆ, 89.40 ಹೆಕ್ಟೇರ್ ತೋಟಗಾರಿಕೆ ಸೇರಿ 567.87 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 162.50 ಹೆಕ್ಟೇರ್ ಕೃಷಿ, 35 ಹೆಕ್ಟೇರ್ ತೋಟಗಾರಿಕೆ ಬೆಳೆ ಸೇರಿ 197.50 ಹೆಕ್ಟೇರ್ ಹಾನಿಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ 100.71 ಹೆಕ್ಟೇರ್ ಕೃಷಿ ಬೆಳೆ ಹಾಗೂ 22.90 ಹೆಕ್ಟೇರ್ ತೊಟಗಾರಿಕೆ ಬೆಳೆ ಸೇರಿ 123.61 ಹೆಕ್ಟೇರ್ ಬೆಳೆ ಹಾನಿಯಾಗಿದೆ.
ಬೆಳೆಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕರಿಗಳ ಕಚೇರಿ ಸೇರಿದಂತೆ ಆಯಾ ತಾಲ್ಲೂಕು ತಹಶೀಲ್ದಾರ್ ಕಚೇರಿ, ಗ್ರಾಮ ಪಂಚಾಯತಿ ಕಚೇರಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಬುಧವಾರದಂದು ಪ್ರಕಟಿಸಲಾಗಿದೆ. ಈ ಕುರಿತು ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ, ಸಂಬಂಧಪಟ್ಟ ತಹಶೀಲ್ದಾರ್, ಕೃಷಿ, ತೋಟಗಾರಿಕೆ ಇಲಾಖೆಯ ಕಚೇರಿಗಳಿಗೆ 7 ದಿನಗಳೊಳಗಾಗಿ ಸಲ್ಲಿಸಬಹುದು. ಈ ಅವಧಿಯಲ್ಲಿ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದರೆ ಪಟ್ಟಿಯನ್ನು ಅಂತಿಮಗೊಳಿಸಿ ನಿಯಮಾನುಸಾರ ಪರಿಹಾರ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: KEAಯಿಂದ ‘PSI ಪರೀಕ್ಷೆ’ಯ ‘ತಾತ್ಕಾಲಿಕ ಅಂಕಪಟ್ಟಿ’ ಪ್ರಕಟ | Karnataka PSI Recruitment 2024
BIG NEWS: ಶಾಲಾ ಶಿಕ್ಷಣ ಇಲಾಖೆಯಿಂದ SSLC ಮುಖ್ಯ ಪರೀಕ್ಷೆಯ ‘NSQF ಪರೀಕ್ಷಾ’ ಪ್ರಕ್ರಿಯೆ ಬಗ್ಗೆ ಮಾರ್ಗಸೂಚಿ ಪ್ರಕಟ