ಬೆಂಗಳೂರು : ಗಣಿ ಹಗರಣ ಪ್ರಕರಣದ ತನಿಖೆ ವಿಚಾರವಾಗಿ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನಿನ್ನೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಡಿ ಕುಮಾರಸ್ವಾಮಿ, ನಿಖಿಲ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ.
ಈ ಕುರಿತು ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ಈ ಕುರಿತಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯ ವೇಳೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ. ಪೊಲೀಸರನ್ನು ಕಳಿಸಿ ಬಂಧಿಸಲು ಯತ್ನಿಸುತ್ತಿದ್ದಾರೆ. 10 ವರ್ಷದ ಹಿಂದಿನ ನಿರೀಕ್ಷಣಾ ಜಾಮೀನು ರದ್ದು ಪಡಿಸಲು ಯತ್ನಿಸುತ್ತಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಪರ ಹಿರಿಯ ವಕೀಲ ಹಶ್ಮತ್ ಪಾಷಾ ವಾದ ಮಂಡಿಸಿದರು.
ಎಫ್ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು ರದ್ದು ಪಡಿಸುವಂತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ನಿರ್ಬಂಧ ವಿಧಿಸಿದೆ. ಇದೆ ವೇಳೆ ಬಲವಂತದ ಕ್ರಮ ಕೈಗೊಳ್ಳಲ್ಲವೆಂಬ ಎಸ್ ಪಿ ಪಿ ಹೇಳಿಕೆಯನ್ನು ಕೂಡ ಹೈ ಕೋರ್ಟ್ ದಾಖಲಿಸಿಕೊಂಡಿದೆ.
ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಎನ್ಎಸ್ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಈ ಒಂದು ಪ್ರಕರಣದಲ್ಲಿ ಹೆಚ್ಡಿ ಕುಮಾರಸ್ವಾಮಿ A1, ನಿಖಿಲ್ ಕುಮಾರಸ್ವಾಮಿ A2, ಹಾಗೂ ಜೆಡಿಎಸ್ ಮುಖಂಡ ಸುರೇಶ್ ಬಾಬು A3 ಆರೋಪಿಗಳಾಗಿದ್ದಾರೆ.