ಬೆಂಗಳೂರು: ಆದಾಯ ತೆರಿಗೆ ಮತ್ತು ಜಿಎಸ್ಟಿ ಪಾವತಿಸದಿದ್ದರೂ ತಾಂತ್ರಿಕ ಕಾರಣದಿಂದಾಗಿ ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ ಕುಟುಂಬಗಳ ಬಡತನ ರೇಖೆಗಿಂತ ಕೆಳಗಿನ ಬಿಪಿಎಲ್ ಕಾರ್ಡ್ ರದ್ದಾಗಿದೆ.
ಈ ಕುಟುಂಬಗಳು ಈಗಾಗಲೇ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯಿಂದಲೂ ವಂಚಿತರಾಗಿದ್ದಾರೆ. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿರುವುದು 10,000 ಕುಟುಂಬಗಳಿಗೆ ಶಾಕ್ ನೀಡಿದೆ. ತಾವು ಐಟಿ, ಜಿಎಸ್ಟಿ ಪಾವತಿದಾರರಲ್ಲ. ಆದರೂ, ಐಟಿ, ಜಿಎಸ್ಟಿ ಪಾವತಿದಾರರು ಎಂದು ಭಾಗ್ಯಲಕ್ಷ್ಮಿ ಹಣ ಪಾವತಿ ಮಾಡುತ್ತಿಲ್ಲ ಎಂದು ಅರ್ಹ ಸಾವಿರಾರು ಮಹಿಳೆಯರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿ ಸುಮಾರು 7-8 ತಿಂಗಳಾಗಿದ್ದರೂ, ಕೆಲವರು ಐಟಿ, ಜಿಎಸ್ಟಿ ಪಾವತಿದಾರರಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದ್ದರೂ ಭಾಗ್ಯಲಕ್ಷ್ಮಿ ಹಣ ಪಾವತಿ ಆಗಿಲ್ಲ.
ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.
ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ 1.78 ಲಕ್ಷ ಮಹಿಳೆಯರು ನೋಂದಾಯಿಸಿಕೊಂಡು, 2000 ಪಡೆಯುತ್ತಿದ್ದಂತ ಶಂಕೆ ವ್ಯಕ್ತವಾಗಿತ್ತು.
ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತನಿಖೆ ಕೈಗೊಂಡು, ಪರಿಶೀಲನೆ ನಡೆಸಿದ ಕಾರಣ, ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಂತ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ. ಅಲ್ಲದೇ ದಾಖಲೆ ಪರಿಶೀಲನೆಗೆ ಚಾಲನೆ ನೀಡಲಾಗಿದೆ. ಇ-ಗವರ್ನೆನ್ಸ್ ಇಲಾಖೆಗೆ ತನಿಖೆ ನಡೆಸಲು ಮಹಿಳಾ ಇಲಾಖೆ ಸೂಚಿಸಿದೆ.
ಈ ಕಾರಣದಿಂದಾಗಿ ರಾಜ್ಯದಲ್ಲಿ ತೆರಿಗೆ ಪಾವತಿದಾರರಾದ ಕಾರಣ 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮೀ ಹಣಕ್ಕೆ ತಡೆಯನ್ನು ಇಲಾಖೆ ನೀಡಿ, ಬಿಗ್ ಶಾಕ್ ನೀಡಲಾಗಿದೆ.