ಹೈದರಾಬಾದ್ : ತೆಲಂಗಾಣದಲ್ಲಿ ಡ್ರಿಂಕ್ & ಡ್ರೈವ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವವರಿಗೆ ನ್ಯಾಯಾಲಯ ವಿನೂತನ ಶಿಕ್ಷೆ ನೀಡಿದ್ದು, ಒಂದು ವಾರ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗುವಂತೆ ಕೋರ್ಟ್ ಆದೇಶ ಹೊರಡಿಸಿದೆ.
ಹೌದು,ತೆಲಂಗಾಣದ ಮಂಚಿರ್ಯಾಲ ಜಿಲ್ಲಾ ಕೇಂದ್ರದಲ್ಲಿ ಇತ್ತೀಚೆಗೆ ಪೊಲೀಸರು ನಡೆಸಿದ ಡ್ರಂಕ್ ಆ್ಯಂಡ್ ಡ್ರೈವ್ ವಾಹನ ತಪಾಸಣೆಯಲ್ಲಿ ಸಿಕ್ಕಿಬಿದ್ದ 27 ಜನರನ್ನು ಸಂಚಾರಿ ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಪ್ರಕರಣದ ಪರಿಶೀಲಿಸಿದ ಮಂಚಾರ್ಯ ಒಂದನೇ ಹೆಚ್ಚುವರಿ ಪ್ರಥಮ ದರ್ಜೆ ನ್ಯಾಯಾಧೀಶರು ಗುರುವಾರದಿಂದ ಒಂದು ವಾರಗಳ ಕಾಲ ಸ್ಥಳೀಯ ತಾಯಂದಿರ ಮತ್ತು ಮಕ್ಕಳ ಆರೈಕೆ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯ ನಡೆಸುವಂತೆ ಆದೇಶಿಸಿಸಲಾಗಿದ್ದು, ವಾಹನ ಸವಾರರು ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.