ಬೆಂಗಳೂರು : ಮೈಸೂರು : ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆಯಷ್ಟೇ ಲೋಕಾಯುಕ್ತ ತನಿಖೆ ಎದುರಿಸಿದ್ದು, ಇದೀಗ ಇಡಿ ಆತಂಕ ಎದುರಾಗಿದೆ.
ಲೋಕಾಯುಕ್ತ ವಿಚಾರಣೆ ಬೆನ್ನಲ್ಲೇ ಇಡಿ ಅಧಿಕಾರಿಗಳು ನೋಟಿಸ್ ನೀಡಿ ಅವರನ್ನು ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇಡಿ ಮುಡಾ ಅಧಿಕಾರಿ, ತಾಲೂಕು ಕಚೇರಿ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಹಿನ್ನೆಲೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ಸಿಎಂ ಸಿದ್ದರಾಮಯ್ಯಗೆ ಇಡಿ ನೋಟಿಸ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಸಾಮಾನ್ಯರಂತೆ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ವಿಚಾರಣೆ ನಡೆಸಿದ್ದು, ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಂಯ್ಯಗೆ ಮತ್ತೊಂದು ನೋಟಿಸ್ ನೀಡಲಾಗಿದ್ದು, ವಿಚಾರಣೆಗೆ ಕರೆದಾಗ ಮತ್ತೆ ಬರಬೇಕು ಎಂದು ಎಸ್ ಪಿ ಉದೇಶ್ ಅವರು ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ನಿನ್ನೆ ವಿಚಾರಣೆಗೆ ಸಿಎಂ ಸಿದ್ದರಾಮಯ್ಯ ಹಾಜರಾಗಿದ್ದರು.