ಹಾವೇರಿ : ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮಾನಸಿಕವಾಗಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಾವೇರಿ ರೈತರು ಆರೋಪಿಸಿದ್ದಾರೆ.
ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ಚನ್ನಪ್ಪ ಎಂಬುವರ ಪುತ್ರ ರುದ್ರಪ್ಪ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿರುವಾಗಿ ರೈತರು ಆರೊಪಿಸಿದ್ದಾರೆ.
8 ವರ್ಷಗಳ ಹಿಂದೆ 4 ಎಕರೆ ಹೊಲದ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮನನೊಂದು ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹಾವೇರಿಯ ರೈತರು ಆರೋಪಿಸಿದ್ದಾರೆ. ಸದ್ಯ ರೈತರು ವಕ್ಫ್ ನೋಟಿಸ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.