ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಪ್ರಕರಣದ A1 ಆರೋಪಿ ಆಗಿರುವಂತಹ ಪವಿತ್ರ ಗೌಡ ಜಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ಅನ್ವಯ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನವೆಂಬರ್ 21ಕ್ಕೆ ವಿಚಾರಣೆಯನ್ನು ಮುಂದೂಡಿತು.
ಇಂದು ಪವಿತ್ರಾ ಗೌಡ ಜೊತೆಗೆ ಇತರೆ ಆರೋಪಿಗಳಾದ ಅನುಕುಮಾರ್. ನಾಗರಾಜ್, ಲಕ್ಷ್ಮಣ್, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಪವಿತ್ರ ಗೌಡ ಜಮೀನು ಅರ್ಜಿ ವಿತರಣೆ ನವೆಂಬರ್ 21ಕ್ಕೆ ಮಂದೂಡಿ ಹೈಕೋರ್ಟ್ ಆದೇಶಿಸಿತು.
ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಕಳೆದ ಒಂದು ವಾರದ ಹಿಂದೆ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಇದೀಗ ನಟ ದರ್ಶನವರು ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ನಟ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ದರ್ಶನ್ ಅವರ ವೈದ್ಯಕೀಯ ವರದಿ ಸಲ್ಲಿಸಿದ್ದಾರೆ.