ಬೆಂಗಳೂರು: ನಗರದ ಮತ್ತೊಂದು ಪ್ರತಿಷ್ಠಿತ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಕೂಡಲೇ ಪೊಲೀಸರು ಪರಿಶೀಲಿಸಲಾಗಿ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಷಪ್ ಕಾಟನ್ ಶಾಲೆಗೆ ವೆಬ್ ಸೈಟ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಮೂಲಕ ಕಳಉಹಸಲಾಗಿದೆ. ಬೆಳಿಗ್ಗೆ ಬಂದಿದ್ದಂತ ಬೆದರಿಕೆ ಸಂದೇಶವನ್ನು ಮಧ್ಯಾಹ್ನ ಶಾಲಾ ಸಿಬ್ಬಂದಿಗಳು ಗಮನಿಸಿದ್ದಾರೆ.
ಈ ಬೆದರಿಕೆಯ ಸಂದೇಶದ ನಂತ್ರ ಕೂಡಲೇ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದಂತ ಶ್ವಾನ ದಳ, ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿಗಳು ಬಿಷಪ್ ಕಾಟನ್ ಶಾಲೆಯನ್ನು ಪರಿಶೀಲಿಸಿದ್ದಾರೆ.
ಪೊಲೀಸರು ಪರಿಶೀಲನೆಯ ನಂತ್ರ ಯಾವುದೇ ಬಾಂಬ್ ಶಾಲೆಯಲ್ಲಿ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಎಂಬುದಾಗಿ ತಿಳಿಸಿದ್ದಾರೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
‘ಗೃಹಲಕ್ಷ್ಮೀ ಯೋಜನೆ’ ಬಗ್ಗೆ ಸುಳ್ಳು ಜಾಹೀರಾತು: ‘ಮೋದಿ’ ಕ್ಷಮೆಯಾಚನೆಗೆ ‘ಸಿಎಂ ಸಿದ್ದರಾಮಯ್ಯ’ ಒತ್ತಾಯ
`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!