ಚಿಕ್ಕಬಳ್ಳಾಪುರ : ಆಸ್ತಿಯ ಇ-ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ನಗರಸಭೆಯ ಆರ್ ಒ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಬಿದನೂರು ನಗರಸಭೆಯ ಆರ್ ಒ ನಾರಾಯಣ ಹಾಗೂ ಕೇಸ್ ವರ್ಕರ್ ಕೃಷ್ಣಮೂರ್ತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಆಸ್ತಿಯ ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಇ ವೇಳೆ ಹದಿನೈದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ. ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಕುರಿತು, ಜುಲ್ಫಿಕರ್ ಅಲಿ ಭೂಟ್ಟೋ ಎನ್ನುವವರು ಈ ಕುರಿತಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದೀಗ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.