ಬೆಂಗಳೂರು: ಕೆಎಎಸ್ ಪರೀಕ್ಷಾ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 30 ದಿನಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್.16ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ವಾರ್ತಾ ಇಲಾಖೆ ಸೂಚಿಸಿದೆ.
ಕರ್ನಾಟಕ ಲೋಕ ಸೇವಾ ಆಯೋಗವು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಿದೆ.
ಆಸಕ್ತರು ನವೆಂಬರ್ 16 ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ 0821 2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!
BREAKING: ನ.20ರಂದು ರಾಜ್ಯಾದ್ಯಂತ ‘ಮದ್ಯ ಮಾರಾಟ ಬಂದ್’ ಫಿಕ್ಸ್ : ಅಧ್ಯಕ್ಷ ಗುರುಸ್ವಾಮಿ ಹೇಳಿಕೆ