ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯ ಎಂಬಿಬಿಎಸ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರವೇ ಮೊದಲ ವರ್ಷದ ಶುಲ್ಕವಾಗಿರುವಂತ 25 ಲಕ್ಷವನ್ನು ಭರಿಸಲಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು, ಪಿಯುಸಿಯಲ್ಲಿ ಶೇಕಡ 95 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೊದಲನೆ ವರ್ಷದ ಕಾಲೇಜು ಶುಲ್ಕ ₹25 ಲಕ್ಷ ಗಳನ್ನು ಸರ್ಕಾರವೇ ಭರಿಸಲಿದೆ ಎಂದಿದ್ದಾರೆ.
ಅಲ್ಲದೇ, ಇದೇ ವಿದ್ಯಾರ್ಥಿಗಳು ಎಂಬಿಬಿಎಸ್ ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಟ ಶೇಕಡ 60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಮತ್ತೆ ₹25 ಲಕ್ಷ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ತಿಳಿಸಿದ್ದಾರೆ.
ಪಿಯುಸಿಯಲ್ಲಿ ಶೇಕಡ 95 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೊದಲನೆ ವರ್ಷದ ಕಾಲೇಜು ಶುಲ್ಕ ₹25 ಲಕ್ಷ ಗಳನ್ನು ಸರ್ಕಾರವೇ ಭರಿಸಲಿದೆ.
ಅಲ್ಲದೇ, ಇದೇ ವಿದ್ಯಾರ್ಥಿಗಳು… pic.twitter.com/TVsjThLmOE
— DIPR Karnataka (@KarnatakaVarthe) November 7, 2024
`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!
BREAKING: ನ.20ರಂದು ರಾಜ್ಯಾದ್ಯಂತ ‘ಮದ್ಯ ಮಾರಾಟ ಬಂದ್’ ಫಿಕ್ಸ್ : ಅಧ್ಯಕ್ಷ ಗುರುಸ್ವಾಮಿ ಹೇಳಿಕೆ