ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಜೊತೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಕೋಲಾರ, ರಾಮನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.