ಬೆಂಗಳೂರು : ಪಿಯುಸಿಯಲ್ಲಿ ಶೇಕಡ 95 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೊದಲನೆ ವರ್ಷದ ಕಾಲೇಜು ಶುಲ್ಕ ₹25 ಲಕ್ಷ ಗಳನ್ನು ಸರ್ಕಾರವೇ ಭರಿಸಲಿದೆ.
ಅಲ್ಲದೇ, ಇದೇ ವಿದ್ಯಾರ್ಥಿಗಳು ಎಂಬಿಬಿಎಸ್ ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಟ ಶೇಕಡ 60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಮತ್ತೆ ₹25 ಲಕ್ಷ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಯು ಪಿಯುಸಿಯಲ್ಲಿ ಶೇಕಡ 95 ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಲಭ್ಯವಾಗದಿದ್ದಾಗ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ 25 ಲಕ್ಷ ರೂಪಾಯಿ ಪಾವತಿಸಲು ಪ್ರೋತ್ಸಾಹ ಧನ ಮಂಜೂರು ಮಾಡಲಾಗುವುದು.
ಅದೇ ವಿದ್ಯಾರ್ಥಿಯು ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 60ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಪುನಃ 25 ಲಕ್ಷ ಪ್ರೋತ್ಸಾಹಧನ ಮಂಜೂರು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.