ಬೆಂಗಳೂರು: ಚಿಕ್ಕೋಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಗುತ್ತಿಗೆ ನೀಡಲು ಲಂಚಕ್ಕೆ ಚಿಕ್ಕೋಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ರವಿಕುಮಾರ್ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಲಂಚದ ಹಣ ಪಡೆಯುತ್ತಿದ್ದಾಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು, ವೀಡಿಯೋ ಕೂಡ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಚಿಕ್ಕೋಡಿ ತಾಲ್ಲೂಕು ಸಹಾಯಕ ನಿರ್ದೇಶಕ ಗ್ರೇಡ್-1 ರವಿಕುಮಾರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 07.11.2024ರಂದು ಮಾಧ್ಯಮಗಳಲ್ಲಿ ಪುಸಾರಗೊಂಡಿರುವ ದೃಶ್ಯವಳಿಗಳಲ್ಲಿ ರವಿಕುಮಾರ್, ಸಹಾಯಕ ನಿರ್ದೇಶಕರು ಗ್ರೇಡ್-1, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರು ಲೋಕೋಪಯೋಗಿ ಇಲಾಖೆ, ಚಿಕ್ಕೋಡಿ ತಾಲ್ಲೂಕು ಇವರಿಗೆ ವಹಿಸಿರುವ 2020-21 ನೇ ಸಾಲಿನಲ್ಲಿ ಪರಿಶಿಷ್ಟ ತಾಲ್ಲೂಕಿನ ಅಕ್ಕೋಳ ಗ್ರಾಮದಲ್ಲಿ ಕಾಲೋನಿಯಲ್ಲಿ ರೂ. 20.00 ಲಕ್ಷಗಳ ವೆಚ್ಚದಲ್ಲಿ ಸುದಾಯ ಭವನ ನಿರ್ಮಾಣ ಕಾಮಗಾರಿಯ ಜಂಟಿ ಪರಿಶೀಲನಾ ವರದಿಯನ್ನು ನೀಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟು, ಗುತ್ತಿಗೆದಾರರು ರೂ.10,000/- ನೀಡಲಾಗಿ, ರೂ.20,000/- ಕ್ಕೆ ಬೇಡಿಕೆ ಇಟ್ಟು, ಬಾರ್‌ನಲ್ಲಿ ಮಧ್ಯ ಸೇವನೆ ಮಾಡುವಾಗ ಲಂಚದ ಹಣ ಪಡೆಯುತ್ತಿರುವುದು ಹಾಗೂ ಸದರಿ ಕಛೇರಿಯ ಕಿರಣ್, ಕಂಪ್ಯೂಟರ್ ಆಪರೇಟರ್ (ಹೊರ ಸಂಪನ್ಮೂಲ ಸಿಬ್ಬಂದಿ) ಕಛೇರಿ ಕೆಲಸ ಮಾಡಿಕೊಡಲು ರೂ.500/-ಗಳನ್ನು ಕಛೇರಿಯಲ್ಲಿ ಪಡೆಯುತ್ತಿರುವುದು ಪವರ್ ಟಿವಿ ದೃಶ್ಯವಳಿಗಳಲ್ಲಿ ಕಂಡುಬರುತ್ತದೆ ಎಂದಿದ್ದಾರೆ.
ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಳಗಾವಿ ಜಿಲ್ಲೆ ಇವರ ಪತ್ರದಲ್ಲಿ ರವಿಕುಮಾರ್, ಸಹಾಯಕ ನಿರ್ದೇಶಕರು ಜವಾಬ್ದಾರಿಯುತ ತಾಲ್ಲೂಕು ಗ್ರೇಡ್-1, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರು ಮಟ್ಟದ ಅಧಿಕಾರಿಯಾಗಿ ಈ ರೀತಿ ಬಾರ್ ನಲ್ಲಿ ಮಧ್ಯ ಸೇವನೆ ಮಾಡುವಾಗ ಲಂಚದ ಹಣ ಸ್ವೀಕರಿಸುತ್ತಿರುವುದು ಮೇಲ್ನೋಟಕ್ಕೆ ಭ್ರಷ್ಟಾಚಾರ ಪುತಿಬಂಧಕ ಕಾಯ್ದೆಯ ಉಲ್ಲಂಘಿಸುವುದರ ಜೊತೆಗೆ ಸಾರ್ವಜನಿಕರಲ್ಲಿ ಇಲಾಖೆಯ ಮೇಲೆ ಇಟ್ಟ, ವಿಶ್ವಾಸಕ್ಕೆ ದಕ್ಕೆ ತಂದಿರುವುದರಿಂದ ಸದರಿ ಅಧಿಕಾರಿಯ ಮೇಲೆ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವಂತೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆರವರನ್ನು ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.
ದೃಶ್ಯ ಮಾಧ್ಯಮದ ಸದರಿ ಅಂಶಗಳನ್ನು ಹಾಗೂ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರ ಪತ್ರದಲ್ಲಿನ ಅಂಶಗಳನ್ನು ಪರಿಶೀಲಿಸಲಾಗಿ ರವಿಕುಮಾರ್ ಇವರು ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡಿರುವುದು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ, 1988 ರನ್ವಯ ಹಾಗೂ ಕರ್ನಾಟಕ ನಾಗರಿಕ ಸೇವೆಗಳ (ನಡತೆ) ನಿಯಮಗಳು, 2021 ರ ನಿಯಮ 3(1)(iii)(iii)ನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿ ಕಂಡು ಬರುತ್ತದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಇವರ ಮೇಲಿನ ಆರೋಪಗಳ ಸತ್ಯಾಸತ್ಯತೆಯನ್ನು ತಿಳಿಯಲು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು ನಿಯಮ-10(1)()ರನ್ವಯ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ 19570 ಸದರಿರವರನ್ನು ಅಮಾನತ್ತುಗೊಳಿಸಲು ನಿರ್ಧರಿಸಿ, ಈ ಕೆಳಕಂಡಂತೆ ಆದೇಶಿಸಿದ್ದಾರೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಂತೆ ರವಿಕುಮಾರ್, ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರನ್ನು ಗಂಭೀರ ಸ್ವರೂಪದ ಕರ್ತವ್ಯ ಲೋಪದ ಕಾರಣಕ್ಕಾಗಿ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ-10(1)(ಡಿ)ರನ್ವಯ ಪುದತ್ತವಾದ ಸೇವೆಯಿಂದ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ
ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.
ಸದರಿ ಅಧಿಕಾರಿಯು ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ನಿಯಮ-98ರನ್ನಯ ನಿಯಮ-98ರನ್ವಯ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ. ಸದರಿ ಅಧಿಕಾರಿಯು ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನವನ್ನು ಬಿಡತಕ್ಕದಲ್ಲ ಎಂದು ತಿಳಿಸಿದ್ದಾರೆ.
ಸರ್ಕಾರದ ಆದೇಶ ಸಂಖ್ಯೆ ಸಕಇ 508 ಪಕಸೇ 2024
ಶ್ರೀ ರವಿಕುಮಾರ್, ಸಹಾಯಕ ನಿರ್ದೇಶಕರು, ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರನ್ನು ಗಂಭೀರ ಸ್ವರೂಪದ ಕರ್ತವ್ಯ ಲೋಪದ ಕಾರಣಕ್ಕಾಗಿ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು… pic.twitter.com/MpHD68cPf2
— ಸಮಾಜ ಕಲ್ಯಾಣ ಇಲಾಖೆ (@SWDGoK) November 8, 2024
ಉದ್ಯೋಗ ವಾರ್ತೆ : `ಪವರ್ ಮ್ಯಾನ್’ ಸೇರಿ `KPTCL’ನ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ | KPTCL Recruitment