ಕೊಪ್ಪಳ : ಕಳೆದ ಎರಡು ದಿನಗಳ ಹಿಂದೆ ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿ ಎ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಕೊಪ್ಪಳದಲ್ಲಿ ಆಸಿಡ್ ಸೇವಿಸಿ ವಿದ್ಯುತ್ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಹೌದು ಜೆಸ್ಕಾಂ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಜಯರಾಂ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ಜೆಸ್ಕಾಂ ಅಧಿಕಾರಿಗಳ ಕಿರುಕುಳ ಆರೋಪ ಕೇಳಿ ಬಂದಿದೆ. ಗುತ್ತಿಗೆದಾರ ಜಯರಾಂ ಕೊಪ್ಪಳ ತಾಲೂಕಿನ ಗಿಣಗೆರೆ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ.
ಆತ್ಮಹತ್ಯೆಗು ಮುನ್ನ ಅವರು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಮೇಲಾಧಿಕಾರಿಗಳು ತುಂಬಾ ಕಿರುಕುಳ ನೀಡುತ್ತಿದ್ದಾರೆ.ಹೀಗಾಗಿ ನಾನು ಯಾವುದೇ ರೀತಿ ಕೆಲಸ ಮಾಡಲು ಆಗುತ್ತಿಲ್ಲ ಅಧಿಕಾರಿಗಳ ಕಿರುಕುಳ ನೀಡಿದ್ದಾರೆ ಎಂದು ಡೆತ್ ನೋಟ್ ಬರೆದಿದ್ದಾರೆ. ಘಟನೆ ಸಂಬಂಧ ಕೊಪ್ಪಳ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.