ಶಿವಮೊಗ್ಗ: ತಾಲ್ಲೂಕು ಹೊಳಲೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗದಿಂದ ಸರಬರಾಜಾಗುವ ಎಫ್-7, ಎಫ್-8 ಮತ್ತು ಎಫ್-10 ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಇರುವುದರಿಂದ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ನ. 12, 13, 14 ಮತ್ತು 15 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 6 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.
ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಶಿವಮೊಗ್ಗ, ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜು, ಶಿವಮೊಗ್ಗ ಇವರ ಸಹಯೋಗದೊಂದಿಗೆ ನ.11 ರಂದು ಬೆಳಗ್ಗೆ 10 ಕ್ಕೆ ನಗರದ ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜು ಇಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ನೆರವೇರಿಸುವರು. ಅಧ್ಯಕ್ಷತೆಯನ್ನು ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ(ಪ್ರಭಾರ) ಶ್ರೀಮತಿ ಭಾರತಿ ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ ಎಂ.ಎಸ್. ಮತ್ತು ಸರ್ಕಾರಿ ಬಾಲಿಕ ಪದವಿ ಪೂರ್ವ ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕ ಶಿವಲೀಂಗಪ್ಪ ಬಿ .ಎಲ್ ಭಾಗವಹಿಸುವರು.
ಕಾಂಗ್ರೆಸ್ ಕೊಟ್ಟಂತಹ ಒಂದು ಯೋಜನೆ ಕೊಟ್ಟಿದ್ದಾರಾ?: ಬಿಜೆಪಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ