ನವದೆಹಲಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದ ವಿಚಾರವಾಗಿ ಸಿಬಿಐ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಪ್ರಕರಣದ ಕುರಿತು ಪ್ರತಿಕ್ರಿಯೆ ಕೇಳಿ ನೋಟಿಸ್ ನೀಡಿದೆ.
ಹೌದು ಇತ್ತೀಚೆಗೆ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ಈ ನಡೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಂದು ಸುಪ್ರೀಂಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಾಸ್ ಪಡೆದಿತ್ತು.
ಹೈಕೋರ್ಟ್ ನಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹಾಗೂ ಸಿಬಿಐ ಈ ಆದೇಶದ ಕುರಿತು ಪ್ರಶ್ನಿಸಿದ್ದರು.ಈ ವೇಳೆ ಶಾಸಕ ಯತ್ನಾಳ್ ಹಾಗೂ ಸಿಬಿಐ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯತ್ನಾಳ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಕಳೆದ ವಾರ ಸುಪ್ರೀಂ ಕೋರ್ಟ್ ಗೆ ಸಿಬಿಐ ಕೂಡ ಮೇಲ್ಮನವಿ ಸಲ್ಲಿಸಿತ್ತು. ಸಿಬಿಐ ಮೇಲ್ಮನವಿ ಅರ್ಜಿಯನ್ನು ಇಂದು ವಿತರಣೆ ನಡೆಸಿ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಕೇಳಿದೆ.
ಏನಿದು ಪ್ರಕರಣ?
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಸಿಬಿಐ ತನಿಖೆ ಆದೇಶ ವಾಪಸ್ ಪಡೆಯುವ ನಿರ್ಧಾರ ಕೈಗೊಂಡಿತ್ತು. ಆ ಬಗ್ಗೆ ಸಚಿವ ಸಂಪುಟ ನಿರ್ಣಯ ಕೈಗೊಳ್ಳಲಾಗಿತ್ತು.