ಮಂಡ್ಯ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಿಂದ ಇದಕ್ಕಾಗಿ ಹೆಲ್ಪ್ ಲೈನ್ ನಂಬರ್ ಆರಂಭಿಸಿದೆ.
ಈ ಬಗ್ಗೆ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜಿಲ್ಲೆಯಾಧ್ಯಂತ ಕಾನೂನು ಬಾಹಿರವಾಗಿ ಇಸ್ಪಿಟ್, ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳ ಮಾರಾಟ ಮತ್ತು ಮದ್ಯ ಮಾರಾಟ ಮಾಡುವವರ ಮಾಹಿತಿಗಳನ್ನು ಸಾರ್ವಜನಿಕರು ನೀಡಲು ಹೆಲ್ಪ್ ಲೈನ್ ನಂಬರ್ ಆರಂಭಿಸಿರುವುದಾಗಿ ತಿಳಿಸಿದೆ.
ಸಾರ್ವಜನಿಕರು ಜಿಲ್ಲಾ ಪೊಲೀಸ್ ಕಚೇರಿಯ 08232-227100 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸಹಕರಿಸುವಂತೆ ಕೋರಿದ್ದಾರೆ. ಮಾಹಿತಿ ನೀಡುವವರ ಹೆಸರುಗಳನ್ನು ಗೌಪ್ಯವಾಗಿ ಇಡಲಾಗುವುದು ಎಂಬುದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ವರದಿ: ಗಿರೀಶ್ ರಾಜ್, ಮಂಡ್ಯ
ಬಿಡಿಸಲಾಗದ ಸಮಸ್ಯೆ ಏನೇ ಇರಲಿ ಕ್ಷೇತ್ರ ಪಾಲಕ ಕೋರಗಜ್ಜನಿಗೆ ಹೇಳಿದರೆ, ನಿಮ್ಮ ಸಮಸ್ಯೆ ಕ್ಲಿಯರ್
‘ಸಾಗರ ಟೌನ್’ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ‘ದನ ಕಳ್ಳ’ರ ಬಂಧನ, ಕಾರ್ ಜಪ್ತಿ