ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಣ್ಣದ ಬಗ್ಗೆ ಸಚಿವ ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ವಿರುದ್ಧ ಜೆಡಿಎಸ್ (JDS) ಕಿಡಿಕಾರಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ.
ಈ ಕುರಿತು ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್, ಜಮೀರ್ ಅಹ್ಮದ್ ಅವರೇ, ಹೆಚ್.ಡಿ. ಕುಮಾರಸ್ವಾಮಿ ಅವರು ಜಾತಿ, ಪಂಥ ಮತ್ತು ಬಣ್ಣದಿಂದ ಜನನಾಯಕರಾಗಿ ಬೆಳೆದಿಲ್ಲ. ಅವರ ನಾಯಕತ್ವ ಗುಣ, ಸಮಾಜಕ್ಕೆ ಮತ್ತು ಸಮುದಾಯಗಳ ಅಭಿವೃದ್ಧಿಗೆ ಕೊಟ್ಟಿರುವ ಕೊಡುಗೆಗಳು, ಜನಪರ ಯೋಜನೆಗಳು ಮತ್ತು ಉತ್ತಮವಾದ ಆಡಳಿತ ಮತ್ತು ಆರ್ಥಿಕ ಅಭಿವೃದ್ಧಿ ದೃಷ್ಟಿಕೋನದಿಂದಲೇ ಉತ್ತಮ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ ಎಂದಿದೆ.
ಜಮೀರ್ ಅಹ್ಮದ್ ಅವರೇ,
ಹೆಚ್.ಡಿ. ಕುಮಾರಸ್ವಾಮಿ ಅವರು ಜಾತಿ, ಪಂಥ ಮತ್ತು ಬಣ್ಣದಿಂದ ಜನನಾಯಕರಾಗಿ ಬೆಳೆದಿಲ್ಲ.
ಅವರ ನಾಯಕತ್ವ ಗುಣ, ಸಮಾಜಕ್ಕೆ ಮತ್ತು ಸಮುದಾಯಗಳ ಅಭಿವೃದ್ಧಿಗೆ ಕೊಟ್ಟಿರುವ ಕೊಡುಗೆಗಳು, ಜನಪರ ಯೋಜನೆಗಳು ಮತ್ತು ಉತ್ತಮವಾದ ಆಡಳಿತ ಮತ್ತು ಆರ್ಥಿಕ ಅಭಿವೃದ್ಧಿ ದೃಷ್ಟಿಕೋನದಿಂದಲೇ ಉತ್ತಮ ರಾಜಕಾರಣಿಯಾಗಿ…
— Janata Dal Secular (@JanataDal_S) November 12, 2024
ಸರ್ವಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ನೀವು ಕ್ಷುಲ್ಲಕ ರಾಜಕೀಯಕ್ಕಾಗಿ ದ್ವೇಷ ಹರಡಲು, ಒಡೆದು ಹಾಳುವ ನೀತಿಯನ್ನು ಅನುಸರಿಸುತ್ತಿದ್ದೀರಿ. ನೆನಪಿರಲಿ ಇಲ್ಲಿ, ನಿಮ್ಮ ಒಡೆದು ಹಾಳುವ ನೀತಿಗೆ ಜಾಗವಿಲ್ಲ. ಜನಾಂಗೀಯ ನಿಂದನೆ, ವರ್ಣಭೇದ ಹೇಳಿಕೆಗಳನ್ನು ನೀಡಿ ಅಪಮಾನ ಎಸಗಿರುವ ನೀವು ನಾಡಿನ ಜನರಲ್ಲಿ ಕ್ಷಮೆಯಾಚಿಸಿ, ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.