ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಾರ್ಪೊರೇಷನ್ ಬಳಿ ಈ ಒಂದು ಘಟನೆ ನಡೆದಿದೆ.ಟೂಲ್ಸ್ ನಿಂದ ಬಸ್ಸಿನ ಗಾಜು ಪುಡಿಪುಡಿ ಮಾಡಿ ಚಾಲಕನನ್ನು ಕೆಳಗಿಳಿಸಿ ಹಲ್ಲೆ ನಡೆಸಲಾಗಿದೆ.
ಹೌದು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಬೈಕ್ನಲ್ಲಿ ಹೋಗುತ್ತಿದ್ದ. ಈ ವೇಳೆ ಬಿಎಂಟಿಸಿ ಬಸ್ ಹಾಗೂ ಡಿವೈಡರ್ ಮಧ್ಯೆ ಯುವಕ ದ್ವಿಚಕ್ರ ವಾಹನವನ್ನು ನುಗ್ಗಿಸಿದ್ದಾನೆ.ಬಳಿಕ ಸೈಡ್ ಕೊಡುವಂತೆ ಬಿಎಂಟಿಸಿ ಬಸ್ ಚಾಲಕನಿಗೆ ಯುವಕ ಆವಾಜ್ ಹಾಕಿದ್ದಾನೆ. ಕಾರ್ಪೊರೇಷನ್ ಸಿಗ್ನಲ್ ನಲ್ಲಿ ಬಿಎಂಟಿಸಿ ಬಸ್ ನಿಲ್ಲಿಸುತ್ತಿದ್ದಂತೆ ಹಲ್ಲೆ ನಡೆಸಿದ್ದಾನೆ.
ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಕ್ ನಲ್ಲಿದ್ದ ಟೂಲ್ಸ್ ನಿಂದ ಚಾಲಕನ ಮೇಲೆ ಯುವಕ ಹಲ್ಲೆ ಮಾಡಿದ್ದಾನೆ.ಕೂಡಲೇ ಆರೋಪಿಯನ್ನು ಹಿಡಿದು ಸಾರ್ವಜನಿಕರು ಥಳಿಸಿದ್ದಾರೆ. ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಸ್ ಜೆ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಇಂದು ಬೆಳಿಗ್ಗೆ ಕೂಡ ಬೆಂಗಳೂರಿನ ಬನಶಂಕರಿಯಲ್ಲಿ ಈ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕ ಬಿಎಂಟಿಸಿ ಬಸ್ ಚಾಲಕನ ಮೇಲೆ ರಾಡು, ಚಾಕು ಮತ್ತಿತರರ ಸಲಕರಣೆಯಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ.ಅಲ್ಲದೇ ಡ್ರೈವರ್ ಸೀಟು ಹಾಗೂ ಗ್ಲಾಸ್ ಒಡೆದು ದಾಂಧಲೆ ನಡೆಸಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಬನಶಂಕರಿ ಠಾಣೆ ಪೊಲೀಸರು ಧಾವಿಸಿ ಆಟೋ ಚಾಲಕನನ್ನು ಬಂಧಿಸಿದ್ದಾರೆ. ಡಿಪೊ.ನಂ 44 ಕ್ಕೆ ಸೇರಿದ ಬಸ್ ಗೆ ಹಾನಿಯಾಗಿದೆ.